ಹೆಚ್ಚಿತು ಬೆಂಗಳೂರಿನ ಅಂದ: ನಮ್ಮ ಮೆಟ್ರೋ, ರೈಲು ಲೈನ್‌ ಸುತ್ತಮುತ್ತ ವಿಶೇಷ ಸ್ವಚ್ಚತೆ

ಹೆಚ್ಚಿತು ಬೆಂಗಳೂರಿನ ಅಂದ: ನಮ್ಮ ಮೆಟ್ರೋ, ರೈಲು ಲೈನ್‌ ಸುತ್ತಮುತ್ತ ವಿಶೇಷ ಸ್ವಚ್ಚತೆ

ಹೆಚ್ಚಿತು ಬೆಂಗಳೂರಿನ ಅಂದ: ನಮ್ಮ ಮೆಟ್ರೋ, ರೈಲು ಲೈನ್‌ ಸುತ್ತಮುತ್ತ ವಿಶೇಷ ಸ್ವಚ್ಚತೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಗರದ, ಇಲ್ಲಿನ ನಾಗರಿಕರಿಗಾಗಿ, ಸುಗಮ ವಾಹನ ಸಂಚಾರಕ್ಕೆ ಸಾಕಷ್ಟು ಅನುಕೂಲ ಉಪಕ್ರಮ ಕೈಗೊಂಡಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರ ಪಾಲಿಕೆಯನ್ನಾಗಿಸಿ, ಸುಂದರ ನಗರವನ್ನಾಗಿ ರೂಪಿಸಲು ಹಾಗೂ ಸ್ವಚ್ಛ ಸರ್ವೇಕ್ಷಣ 2025-26ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿರುವ 3ನೇ ಹಂತದ ವಿಶೇಷ ಸ್ವಚ್ಛತಾ ಅಭಿಯಾನದ ಕಾರ್ಯಕ್ರಮಕ್ಕೆ ಈಗಾಗಲೇ ರೂಪಿಸಲಾಗಿರುವ ಸ್ವಚ್ಛತಾ ಕಾರ್ಯ (ಆ್ಯಕ್ಷನ್ ಪ್ಲಾನ್‌ನಂತೆ) ಪಾಲಿಕೆ ವ್ಯಾಪ್ತಿಯ ಆರು ವಿಭಾಗಗಳಲ್ಲಿನ ಮೆಟ್ರೋ ಹಾಗೂ ರೈಲು ಮಾರ್ಗಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಪಾಲಿಕೆ ಆಯುಕ್ತ ಜಗದೀಶ್.ಜಿ ಹೇಳಿದರು.

ಸ್ವಚ್ಛವಾದ 25 ಸ್ಥಳಗಳ ಯಾವುವು?

ನಗರದ ಶಾಂತಿನಗರ, ಸಿ.ವಿ. ರಾಮನ್ ನಗರ, ಶಿವಾಜಿನಗರ, ಗಾಂಧಿನಗರ, ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ಸೇರಿದಂತೆ ಎಲ್ಲಾ ಆರು ವಿಭಾಗಗಳ ವ್ಯಾಪ್ತಿಯಲ್ಲಿರುವ ಮೆಟ್ರೋ ಹಾಗೂ ರೈಲು ಮಾರ್ಗಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛ, ಶುಚಿತ್ವಯುತ ಹಾಗೂ ಸಾರ್ವಜನಿಕರಿಗೆ ಸುರಕ್ಷಿತವಾಗಿಸುವ ಉದ್ದೇಶದಿಂದ ಒಟ್ಟು 25 ಸ್ಥಳಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ವೇಳೆ ಸುಮಾರು 301 ಕೆ.ಜಿ. ತ್ಯಾಜ್ಯವನ್ನು ತೆರವುಗೊಳಿಸಲಾಗಿರುತ್ತದೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಮೆಟ್ರೋ ಹಾಗೂ ರೈಲು ಮಾರ್ಗಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಭಾಗವಾರು ಸ್ವಚ್ಛತಾ ಕಾರ್ಯ ಕೈಗೊಂಡಿರುವ ವಿವರ.

* ಶಾಂತಿನಗರ ವಿಭಾಗ ವ್ಯಾಪ್ತಿಯಲ್ಲಿ - 3
* ಸಿ.ವಿ. ರಾಮನ್ ನಗರ ವಿಭಾಗ ವ್ಯಾಪ್ತಿಯಲ್ಲಿ - 3
* ಶಿವಾಜಿನಗರ ವಿಭಾಗ ವ್ಯಾಪ್ತಿಯಲ್ಲಿ - 1
* ಗಾಂಧಿನಗರ ವಿಭಾಗ ವ್ಯಾಪ್ತಿಯಲ್ಲಿ - 5
* ಚಾಮರಾಜಪೇಟೆ ವಿಭಾಗ ವ್ಯಾಪ್ತಿಯಲ್ಲಿ - 1
* ಚಿಕ್ಕಪೇಟೆ ವಿಭಾಗ ವ್ಯಾಪ್ತಿಯಲ್ಲಿ - 12

13.8 ಕಿ.ಮೀ. ಸಮಗ್ರ ಸ್ವಚ್ಛತೆ

ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸುವ ಉದ್ದೇಶದಿಂದ ಮೆಟ್ರೋ, ರೈಲು ಮಾರ್ಗದ ಸುತ್ತಮುತ್ತ ಒಟ್ಟು ಸುಮಾರು 13.8 ಕಿ.ಮೀ. ವ್ಯಾಪ್ತಿಯಲ್ಲಿ ಸ್ವಚ್ಛತೆ ಮಾಡಲಾಯಿತು. ಇಲ್ಲಿ ಸಂಗ್ರಹವಾಗಿದ್ದ ಘನ ತ್ಯಾಜ್ಯ, ಪ್ಲಾಸ್ಟಿಕ್, ಕಾಗದ, ಒಣ ಎಲೆಗಳು ನೀರಿನ ಬಾಟಲಿಗಳು ಹಾಗೂ ಇತರೆ ತ್ಯಾಜ್ಯವನ್ನು ತೆರವುಗೊಳಿಸಿ, ಪ್ರದೇಶವನ್ನು ಸ್ವಚ್ಛ ಹಾಗೂ ಸುಂದರಗೊಳಿಸಲಾಗಿದೆ.

ಈ ವಿಶೇಷ ಸ್ವಚ್ಛತಾ ಕಾರ್ಯದಲ್ಲಿ ಸುಮಾರು 83 ಪೌರಕಾರ್ಮಿಕರು ಹಾಗೂ 23 ಸ್ವಚ್ಛತಾ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ನಗರದ ಪ್ರಮುಖ ಸಾರ್ವಜನಿಕ ಸಾರಿಗೆ ಮಾರ್ಗಗಳಾದ ಮೆಟ್ರೋ ಹಾಗೂ ರೈಲು ಮಾರ್ಗಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿ ಕಾಪಾಡುವುದು ಪಾಲಿಕೆಯ ಪ್ರಮುಖ ಆದ್ಯತೆಯಾಗಿದೆ. ಸಾರ್ವಜನಿಕರಿಗೆ ಸ್ವಚ್ಛ, ಸುರಕ್ಷಿತ ಹಾಗೂ ಆರೋಗ್ಯಕರ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಇಂತಹ ವಿಶೇಷ ಸ್ವಚ್ಛತಾ ಕಾರ್ಯಾಚರಣೆಗಳು ನಿರಂತರವಾಗಿ ಮುಂದುವರಿಯಲಿವೆ ಎಂದು ಆಯುಕ್ತರು ತಿಳಿಸಿದರು.

ಸಮಗ್ರ ಸ್ವಚ್ಛತಾ ಕಾರ್ಯಾಚರಣೆ

ಸ್ವಚ್ಛತಾ ಕಾರ್ಯಾಚರಣೆಯ ವೇಳೆ ಮೆಟ್ರೋ ಹಾಗೂ ರೈಲು ಮಾರ್ಗಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಕಾಗದ, ಆಹಾರ ತ್ಯಾಜ್ಯ, ನೀರಿನ ಬಾಟಲಿಗಳು, ಒಣ ಎಲೆಗಳು ಹಾಗೂ ಇತರೆ ಘನ ತ್ಯಾಜ್ಯವನ್ನು ಸಂಗ್ರಹಿಸಿ ತೆರವಾಗಿದೆ. ಸಂಗ್ರಹಿಸಲಾದ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸಂಬಂಧಿಸಿದ ಘಟಕಗಳಿಗೆ ರವಾನಿಸಲಾಯಿತು. ಈ ಮೂಲಕ ಮೆಟ್ರೋ ಹಾಗೂ ರೈಲು ಮಾರ್ಗಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛ ಹಾಗೂ ಸುಂದರಗೊಳಿಸುವುದರೊಂದಿಗೆ, ಸಾರ್ವಜನಿಕರು ಮತ್ತು ಪ್ರಯಾಣಿಕರು ಸ್ವಚ್ಛ, ಸುರಕ್ಷಿತ ಹಾಗೂ ಶುಚಿತ್ವಯುತ ವಾತಾವರಣದಲ್ಲಿ ಸಂಚರಿಸಲು ಅನುಕೂಲವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪಾಲಿಕೆ ತಿಳಿಸಿದೆ.

namma metro railways train garbage waste management

namma metro railways train garbage waste management

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ