BREAKING NEWS : ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್‌ಪಾಲ್‌ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ, ಬಾಂಬೆ ಹೈಕೋರ್ಟ್ ತೀರ್ಪು

ಪಣಜಿ (ಗೋವಾ): 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ‘ತಹಲ್ಕಾ’ ನಿಯತಕಾಲಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್‌ಗೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಗುರುವಾರ ಐತಿಹಾಸಿಕ ತೀರ್ಪು ನೀಡಿದೆ.

ವಿಚಾರಣಾ ನ್ಯಾಯಾಲಯ ನೀಡಿದ್ದ ಖುಲಾಸೆ ತೀರ್ಪನ್ನು ವಜಾಗೊಳಿಸಿದ ನ್ಯಾಯಮೂರ್ತಿ ನೀಲಾ ಗೋಖಲೆ ಹಾಗೂ ನ್ಯಾಯಮೂರ್ತಿ ಅಮಿತ್ ಜಾಮ್ಸಂಡೇಕರ್ ಅವರನ್ನೊಳಗೊಂಡ ಪೀಠವು, ತೇಜಪಾಲ್ ಅವರನ್ನು ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯದ ಆರೋಪಗಳಲ್ಲಿ ದೋಷಿ ಎಂದು ತೀರ್ಮಾನಿಸಿದೆ. ಆಧಾರರಹಿತ ತೀರ್ಪು ನೀಡಿದ್ದ ಮಪುಸಾದ ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿ ಹೈಕೋರ್ಟ್ ಈ ಶಿಕ್ಷೆ ಪ್ರಕಟಿಸಿದೆ. ನ್ಯಾಯಾಲಯಕ್ಕೆ ಶರಣಾಗಲು ತರುಣ್ ತೇಜಪಾಲ್‌ಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ.

ಪ್ರಕರಣದ ಹಿನ್ನೆಲೆ:

ನವೆಂಬರ್ 2013ರಲ್ಲಿ ಗೋವಾದ ಐಷಾರಾಮಿ ಹೋಟೆಲ್‌ವೊಂದರಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ, ಲಿಫ್ಟ್ ಒಳಗಡೆ ತರುಣ್ ತೇಜಪಾಲ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರ ಸಹೋದ್ಯೋಗಿ (ಜೂನಿಯರ್ ರಿಪೋರ್ಟರ್) ದೂರು ನೀಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮಪುಸಾದ ಸೆಷನ್ಸ್ ನ್ಯಾಯಾಲಯವು ಮೇ 2021ರಲ್ಲಿ ಸಾಕ್ಷ್ಯಾಧಾರಗಳ ಕೊರತೆ ನೆಪವೊಡ್ಡಿ ತೇಜಪಾಲ್ ಅವರನ್ನು ಖುಲಾಸೆಗೊಳಿಸಿತ್ತು. ಇದನ್ನು ಗೋವಾ ಸರ್ಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.



source https://suddione.com/breaking-news-bombay-high-court-sentences-tarun-tejpal-to-10-years-in-rigorous-imprisonment-in-rape-case/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ