Crop insurance: ತೊಗರಿ, ರಾಗಿ, ಹುರುಳಿ ಬೆಳೆ ವಿಮೆಗೆ ಇನ್ನೊಂದೇ ದಿನ ಬಾಕಿ

Crop insurance: ತೊಗರಿ, ರಾಗಿ, ಹುರುಳಿ ಬೆಳೆ ವಿಮೆಗೆ ಇನ್ನೊಂದೇ ದಿನ ಬಾಕಿ

Crop insurance: ತೊಗರಿ, ರಾಗಿ, ಹುರುಳಿ ಬೆಳೆ ವಿಮೆಗೆ ಇನ್ನೊಂದೇ ದಿನ ಬಾಕಿ

ಬೆಂಗಳೂರು: ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ’ಯಡಿ ವಿವಿಧ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದ್ದು, ನೋಂದಣಿಗೆ ಆಗಸ್ಟ್ 14 ಕೊನೆಯ ದಿನವಾಗಿದೆ ಎಂದು ಕೃಷಿ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಈ ಯೋಜನೆಯಡಿ ಬೆಳೆ ಸಾಲ ಪಡೆದ ಹಾಗೂ ಪಡೆಯದ ಇಬ್ಬರೂ ರೈತರು ಭಾಗವಹಿಸಬಹುದಾಗಿದೆ. ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಯಾವುದೇ ಬ್ಯಾಂಕ್‌ನಲ್ಲಿ ಸಾಲ ಪಡೆದಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ಸಲ್ಲಿಸುವುದನ್ನು ಈ ವರ್ಷದಿಂದ ಕಡ್ಡಾಯಗೊಳಿಸಲಾಗಿದೆ.

ಗ್ರಾಮ ಪಂಚಾಯಿತಿ ಮಟ್ಟ: ಭತ್ತ (ನೀರಾವರಿ)

ಹೋಬಳಿ ಮಟ್ಟ: ತೊಗರಿ (ಮಳೆಯಾಶ್ರಿತ), ರಾಗಿ (ಮಳೆಯಾಶ್ರಿತ), ಸಜ್ಜೆ (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ), ಹುರುಳಿ (ಮಳೆಯಾಶ್ರಿತ) ಮತ್ತು ನೆಲಗಡಲೆ (ನೀರಾವರಿ/ಮಳೆಯಾಶ್ರಿತ).

ಮೇಲ್ಕಂಡ ಎಲ್ಲಾ ಬೆಳೆಗಳಿಗೆ ವಿಮೆ ನೋಂದಾಯಿಸಲು 2026ರ ಆಗಸ್ಟ್ 14,ಕೊನೆಯ ದಿನ.

ಅರ್ಹ ರೈತರು ತಮ್ಮ ಸಮೀಪದ ಸ್ಥಳೀಯ ಬ್ಯಾಂಕ್‌ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳ ಮೂಲಕ ವಿಮೆ ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರಾಜ್ಯ ಸರ್ಕಾರದ ‘ಸಂರಕ್ಷಣೆ’ ಪೋರ್ಟಲ್ (https://www.samrakshane.karnataka.gov.in) ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ