
CWRC ಆದೇಶಕ್ಕೆ ಖಂಡನೆ: ಬೆಂಗಳೂರಲ್ಲಿ ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ ಕನ್ನಡ ಒಕ್ಕೂಟ ಸಂಘಟನೆಯು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜಧಾನಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಿಗ್ಗೆಯಿಂದಲೇ ರಾಜ್ಯ ರಸ್ತೆ ಸಾರಿಗೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಗಳು ಸಂಚರಿಸುತ್ತಿವೆ. ಸಾವಿರಾರು ಮಂದಿ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ನಗರದ ಎಲ್ಲ ರಸ್ತೆಗಳಲ್ಲೂ ವಾಹನ ದಟ್ಟಣೆ ಹೆಚ್ಚಿದ್ದು, ಜನ ತಮ್ಮ ಕೆಲಸಗಳಿಗೆ ತೆರಳುತ್ತಿದ್ದಾರೆ.
ಅಂಗಡಿ, ಹೋಟೆಲ್ ಗಳು ಬಾಗಿಲು ತೆರೆದಿವೆ. ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ತೆರಳುತ್ತಿದ್ದಾರೆ.
ಪ್ರತಿಭಟನೆ ಸ್ಥಳದಲ್ಲಿ ಪೊಲೀಸರು; ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಒಕ್ಕೂಟವು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ.