Gba: ಬೆಂಗಳೂರಿನಲ್ಲಿ ಹೊಸ ಅಭಿಯಾನ ಪ್ರಾರಂಭಿಸಲು ಮುಂದಾದ ಜಿಬಿಎ: ನೀವು ಭಾಗವಹಿಸಬಹುದು!

Gba: ಬೆಂಗಳೂರಿನಲ್ಲಿ ಹೊಸ ಅಭಿಯಾನ ಪ್ರಾರಂಭಿಸಲು ಮುಂದಾದ ಜಿಬಿಎ: ನೀವು ಭಾಗವಹಿಸಬಹುದು!

Gba: ಬೆಂಗಳೂರಿನಲ್ಲಿ ಹೊಸ ಅಭಿಯಾನ ಪ್ರಾರಂಭಿಸಲು ಮುಂದಾದ ಜಿಬಿಎ: ನೀವು ಭಾಗವಹಿಸಬಹುದು!

Gba: ಬೆಂಗಳೂರು ನಗರದಲ್ಲಿ ಮತ್ತೊಂದು ಹೊಸ ಅಭಿಯಾನ ಪ್ರಾರಂಭಿಸುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದಾಗಿದೆ. ಬೆಂಗಳೂರನ್ನು ಹಸಿರೂರು ಎಂದು ಮಾಡುವುದಕ್ಕೆ ಮುಂದಾಗಿದೆ. ಈ ಹಸಿರೂರು ಅಭಿಯಾನವನ್ನು ಜನಾಂದೋಲನವಾಗಿ ರೂಪಿಸಲು ಸಾರ್ವಜನಿಕರು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWAs) ಸಕ್ರಿಯವಾಗಿ ಭಾಗವಹಿಸಬೇಕೆಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಕರೆ ನೀಡಿದ್ದಾರೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಆಗಸ್ಟ್‌ 15ರಿಂದ ಹಮ್ಮಿಕೊಳ್ಳಲು ಯೋಜಿಸಿರುವ 'ಬೆಂಗಳೂರು ಹಸಿರೂರು' ಕಾರ್ಯಕ್ರಮದ ಪೂರ್ವಸಿದ್ಧತೆಗಳ ಕುರಿತು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಾದ್ಯಂತ ಸಸಿಗಳನ್ನು ನೆಡುವ ಸಂಬಂಧ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

ನಗರದಲ್ಲಿ ಈ ಬಾರಿ 60 ಸಾವಿರ ಸಸಿಗಳನ್ನು ನೆಡುವ ಹಾಗೂ 40 ಸಾವಿರ ಸಸಿಗಳನ್ನು ವಿತರಿಸುವ ಯೋಜನೆಯಿದೆ. ಈ ಸಂಬಂಧ ನಗರದಲ್ಲಿ ಸಸಿ ನೆಡುವ ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಈಗಾಗಲೇ 43 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡಲು ನಾಗರಿಕರಿಂದ 236 ಅರ್ಜಿಗಳು ಬಂದಿವೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸಸಿಗಳನ್ನು ನೆಡಲು ಸೂಕ್ತವಾಗಿದೆಯೇ ಎಂಬುದನ್ನು ಪರಿಶೀಲಿಸಿ ಸ್ಥಳಗಳನ್ನು ಅಂತಿಮಗೊಳಿಸುವಂತೆ ಸೂಚಿಸಿದರು. ತಮ್ಮ ಬಡಾವಣೆ, ಬೀದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 30 ಸಸಿಗಳು ಅಥವಾ ಅದಕ್ಕಿಂತ ಹೆಚ್ಚು ನೆಡಲು ಸ್ಥಳಾವಕಾಶವಿದ್ದರೆ, ಆಸಕ್ತಿ ಹೊಂದಿರುವ ಸಾರ್ವಜನಿಕರು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWAs) ತುರ್ತಾಗಿ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು.

RWAsಗಳ ಬೇಡಿಕೆಗಳ ಸಮಗ್ರ ಪಟ್ಟಿ ಸಿದ್ಧಪಡಿಸಿ: ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಎಲ್ಲಾ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಗೆ ಅಗತ್ಯವಿರುವ ಸಸಿಗಳ ಸಂಖ್ಯೆಯನ್ನು ಸಂಗ್ರಹಿಸಿ, ಬೇಡಿಕೆಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪ್ರತಿ ನಗರ ಪಾಲಿಕೆ ವ್ಯಾಪ್ತಿಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳೊಂದಿಗೆ ಸಭೆಗಳನ್ನು ಆಯೋಜಿಸಿ, ಸಸಿ ನೆಡುವಿಕೆ ಹಾಗೂ ನಿರ್ವಹಣೆ ಕುರಿತು ತರಬೇತಿ ನೀಡಬೇಕು. ಜೊತೆಗೆ, ನೆಡಲಾದ ಸಸಿಗಳ ಸಂರಕ್ಷಣೆಗೆ ಸಂಬಂಧಿಸಿದ ಪ್ರತಿಜ್ಞಾ ವಿಧಿಯನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಪಾಲಿಕೆಗಳಲ್ಲಿ ಸಸಿ ನೆಡುವ ಕಾಮಗಾರಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಶೀಘ್ರ ಪೂರ್ಣಗೊಳಿಸಿ, ಯಾವುದೇ ವಿಳಂಬವಿಲ್ಲದೆ ಕಾರ್ಯಾದೇಶಗಳನ್ನು ನೀಡಿ ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಆನ್‌ಲೈನ್ ಮೂಲಕ ಮನವಿ ಸಲ್ಲಿಸಿ

ಇನ್ನು ಬೆಂಗಳೂರು ನಗರದಲ್ಲಿರುವ ಬಡಾವಣೆಗಳ ನಿವಾಸಿಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರಿಕರು ತಮ್ಮ ಬಡಾವಣೆಗಳಲ್ಲಿ ಕನಿಷ್ಠ 30 ಸಸಿಗಳನ್ನು ನೆಡಲು ಅವಕಾಶವಿದ್ದಲ್ಲಿ, ಆಗಸ್ಟ್ 10ರೊಳಗಾಗಿ ಪಾಲಿಕೆಯ ವೆಬ್‌ಸೈಟ್ https://gbatreeplantation.com/ ಹಾಗೂ ಇ-ಮೇಲ್ [email protected] ಮೂಲಕ ಮನವಿ ಸಲ್ಲಿಸಬಹುದು. ಜೊತೆಗೆ, ವಾಟ್ಸ್ಆಪ್ ಚಾಟ್‌ಬಾಟ್ ಸಂಖ್ಯೆ 9480683633ಕ್ಕೂ ಮನವಿ ಸಲ್ಲಿಸಬಹುದಾಗಿದೆ. ಬಂದಿರುವ ಮನವಿಗಳ ಆಧಾರದ ಮೇಲೆ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸಸಿ ನೆಡಲು ಸೂಕ್ತ ಸ್ಥಳವಿದ್ದಲ್ಲಿ ಪಾಲಿಕೆಯಿಂದಲೇ ಸಸಿಗಳನ್ನು ನೆಡಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಕೈಜೋಡಿಸಲು ಮನವಿ

ಬೆಂಗಳೂರು ನಗರವನ್ನು ಇನ್ನಷ್ಟು ಹಸಿರಾಗಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ 'ಬೆಂಗಳೂರು ಹಸಿರೂರು' ಅಭಿಯಾನದಲ್ಲಿ ಭಾಗವಹಿಸಿ, ಸಸಿಗಳನ್ನು ನೆಡುವುದರ ಜೊತೆಗೆ ಅವುಗಳನ್ನು ಪೋಷಿಸಿ ಸಂರಕ್ಷಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

gba namma bengaluru commissioner

gba namma bengaluru commissioner

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ