IAS Transfer: ಮತ್ತೆ 6 ಐಎಎಸ್ ಅಧಿಕಾರಿಗಳ ವರ್ಗ, ಮಂಜುಶ್ರೀಗೆ ಹೊಸ ಹುದ್ದೆ

IAS Transfer: ಮತ್ತೆ 6 ಐಎಎಸ್ ಅಧಿಕಾರಿಗಳ ವರ್ಗ, ಮಂಜುಶ್ರೀಗೆ ಹೊಸ ಹುದ್ದೆ

IAS Transfer: ಮತ್ತೆ 6 ಐಎಎಸ್ ಅಧಿಕಾರಿಗಳ ವರ್ಗ, ಮಂಜುಶ್ರೀಗೆ ಹೊಸ ಹುದ್ದೆ

ಬೆಂಗಳೂರು: ಕರ್ನಾಟಕ ಸರ್ಕಾರವು ಮತ್ತಷ್ಟು ಐಎಎಸ್ ಅಧಿಕಾರಿಗಳನ್ನು ಗುರುವಾರ ವರ್ಗಾವಣೆ ಮಾಡಿ ಹೊಸ ಹುದ್ದೆ ನೀಡಿದೆ.

ಯೋಜನೆ, ಕಾರ್ಯಕ್ರಮ ನಿರ್ವಹಣೆ ಹಾಗೂ ಸಾಂಖ್ಯಿಕ ಇಲಾಖೆ ಕಾರ್ಯದರ್ಶಿಯಾಗಿದ್ದ ಮನೋಜ್‌ ಜೈನ್‌ ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಅವರನ್ನು ಯೋಜನೆ, ಕಾರ್ಯಕ್ರಮ ನಿರ್ವಹಣೆ ಹಾಗೂ ಸಾಂಖ್ಯಿಕ ಇಲಾಖೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಮತ್ತೊಬ್ಬ ಐಎಎಸ್ ಅಧಿಕಾರಿ ಎನ್‌.ಮಂಜುಶ್ರೀ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹೆಚ್ಚುವರಿ ಕಾರ್ಯಭಾರದಲ್ಲಿದ್ದ ಜೆ.ಮಂಜುನಾಥ್‌ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಬಿ.ಆರ್.ಪೂರ್ಣಿಮಾ ಅವರನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆಗಳ ಹೆಚ್ಚುವರಿ ಆಯುಕ್ತರಾದ( ಸೇವಾ ವಿಶ್ಲೇಷಣಾ ವಿಭಾಗ) ಅಪರ್ಣಾ ರಮೇಶ್‌ ಅವರನ್ನು ಇ ಆಡಳಿತ ವಿಭಾಗದ ಕುಟುಂಬ ಯೋಜನಾ ನಿರ್ದೇಶಕರಾಗಿ ಹೆಚ್ಚುವರಿ ಕಾರ್ಯಭಾರ ವಹಿಸಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ