Independence Day Live: ದೇಶದ ಮೂಲೆ ಮೂಲೆಯಲ್ಲೂ 'ವಂದೇ ಮಾತರಂ' ಜಯಘೋಷ: ಪ್ರಧಾನಿ ಮೋದಿ

Independence Day Live: ದೇಶದ ಮೂಲೆ ಮೂಲೆಯಲ್ಲೂ 'ವಂದೇ ಮಾತರಂ' ಜಯಘೋಷ: ಪ್ರಧಾನಿ ಮೋದಿ

Independence Day Live: ದೇಶದ ಮೂಲೆ ಮೂಲೆಯಲ್ಲೂ 'ವಂದೇ ಮಾತರಂ' ಜಯಘೋಷ: ಪ್ರಧಾನಿ ಮೋದಿ

ಅಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನದ ಫಲವಾಗಿ ದೇಶವು ಇಂದು 80ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಿಸುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ. ದೆಹಲಿಯ ಕೆಂಪು ಕೋಟೆ, ಬೆಂಗಳೂರಿನ ಮಾಣಿಕ್‌ ಶಾ ಪರೇಡ್‌ ಮೈದಾನ ಸೇರಿದಂತೆ ಎಲ್ಲೆಡೆ ಧ್ವಜಾರೋಹಣ ನೆರವೇರಿದೆ.

ಗದಗ: ಸಚಿವ ರಾಯರಡ್ಡಿಯಿಂದ ರಾಷ್ಟ್ರಧ್ವಜಾರೋಹಣ

ಸ್ವಾತಂತ್ರ್ಯೋತ್ಸವದ ಅಂಗವಾಗಿ ಗದಗದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಶನಿವಾರ ಸಚಿವ ಬಸವರಾಜ ರಾಯರಡ್ಡಿ ಅವರು ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಧ್ವಜ ಹಿಡಿದು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆಕರ್ಷಕ ಪಥಸಂಚಲನ ನಡೆಯಿತು. ಸಚಿವರ ಭಾಷಣ ಮುಗಿಯುವವರೆಗೆ ಪಥ ಸಂಚಲನದಲ್ಲಿ ಪಾಲ್ಗೊಂಡವರು ಉರಿ ಬಿಸಿಲಿನಲ್ಲಿ ನಿಲ್ಲುವಂತಾಯಿತು.

ಸಚಿವರಾದ ನಂತರ ಇದೇ ಮೊದಲಿಗೆ ಯತೀಂದ್ರ ಧ್ವಜಾರೋಹಣ

ಮೈಸೂರು ಜಿಲ್ಲಾಡಳಿತ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಶನಿವಾರ ಸ್ವಾತಂತ್ರ್ಯ ‌ದಿನವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ

ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿ, ಗೌರವವಂದನೆ ಸ್ವೀಕರಿಸಿದರು.

ರಾಷ್ಟ್ರೀಯ ಏಕತೆ, ಪ್ರಜಾಪ್ರಭುತ್ವ ಮೌಲ್ಯ ಎತ್ತಿಹಿಡಿಯುವ ದಿನ: ಎಂ.ಬಿ.ಪಾಟೀಲ್

ವಿಜಯಪುರದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಶನಿವಾರ ಆಯೋಜಿಸಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ವೀಕ್ಷಿಸಿದರು. ತೆರೆದ ವಾಹನದಲ್ಲಿ ತುಕಡಿಗಳನ್ನು ವೀಕ್ಷಿಸಿದರು.

ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಕೋರಿದ ಅವರು, ಇಂದು ಭಾರತ ಮಾತೆಯು ಬ್ರಿಟಿಷರ ಆಳ್ವಿಕೆಯಿಂದ ಮುಕ್ತವಾಗಿ 79 ವರ್ಷಗಳನ್ನು ಪೂರೈಸಿದ ಐತಿಹಾಸಿಕ ದಿನವಾಗಿದೆ ಎಂದರು. ಸ್ವಾತಂತ್ರ್ಯ ದಿನಾಚರಣೆಯು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲು, ರಾಷ್ಟ್ರೀಯ ಏಕತೆಯನ್ನು ಬಲಪಡಿಸಲು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು ಇರುವ ಅತ್ಯಂತ ಮಹತ್ವದ ರಾಷ್ಟ್ರೀಯ ಹಬ್ಬವಾಗಿದೆ. ಇದರ ದ್ಯೋತಕವಾಗಿ ರಾಷ್ಟ್ರಾದ್ಯಂತ ಸ್ವಾತಂತ್ರ್ಯ ದಿನೋತ್ಸವವನ್ನು ಶ್ರದ್ಧೆ, ಭಕ್ತಿ, ಸಂತಸ ಮತ್ತು ಸಡಗರಗಳಿಂದ ಸಂಭ್ರಮಿಸಲಾಗುತ್ತಿದೆ ಎಂದರು.

ಧ್ವಜಾರೋಹಣ ನೆರವೇರಿಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ

ಯಾದಗಿರಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಶನಿವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಾವೈಕ್ಯತಾ ಸಮಿತಿ ವತಿಯಿಂದ 80ನೇ‌ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಜಿಲ್ಲಾ ಶಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್ ಪಡೆ, ಅರಣ್ಯ ಪಡೆ, ಅಗ್ನಿಶಾಮಕ ಪಡೆ, ಶಾಲಾ ತಂಡಗಳ ಗೌರವ ವಂದನೆಯನ್ನು ಸಚಿವರು ಸ್ವೀಕರಿಸಿದರು.

ಚಾಲ್ತಿಯಲ್ಲಿ 15 ಸಾವಿರ ಬಸ್ ಖರೀದಿ ಪ್ರಕ್ರಿಯೆ: ಸಚಿವ ಸುರೇಶ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ 15 ಸಾವಿರ ಬಸ್ ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.

ನಗರದ ಜಿಲ್ಲಾ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ 80 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಪಂಚಾಯತ್ ರಾಜ್ ಇಲಾಖೆಯ ಹುದ್ದೆ ಭರ್ತಿಗೆ ಶೀಘ್ರ ಅಧಿಸೂಚನೆ: ಖಂಡ್ರೆ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೀದರ್‌ನ ಜಿಲ್ಲಾ‌ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಬಳಿಕ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಇದಾದ ಬಳಿಕ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಡಿಎಆರ್, ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್, ಗೃಹರಕ್ಷಕ ದಳ, ಮಹಿಳಾ ಪೊಲೀಸ್ ತಂಡ, ಅರಣ್ಯ ಇಲಾಖೆ ತಂಡ, ಅಗ್ನಿಶಾಮಕ ದಳ, ಸೇವಾ ದಳ ತಂಡ ಪಥ ಸಂಚಲನದಲ್ಲಿ ಪಾಲ್ಗೊಂಡಿತು.

ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌

ದಾವಣಗೆರೆ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ತೋಟಗಾರಿಕೆ, ಗಣಿ ಮತ್ತು‌ ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ಅವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶನಿವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ತೆರದ ಜೀಪಿನಲ್ಲಿ ಕ್ರೀಡಾಂಗಣದಲ್ಲಿ ಸಂಚರಿಸಿ ಪರೇಡ್ ವೀಕ್ಷಣೆ ಮಾಡಿದರು. ಬಳಿಕ ಆಕರ್ಷಕ ಪಥಸಂಚಲನ ನಡೆಯಿತು. ಪೊಲೀಸ್ ಪಡೆ, ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳ ತಂಡಗಳು ಪಥಸಂಚನದಲ್ಲಿ ಪಾಲ್ಗೊಂಡಿದ್ದವು.

ಎಲ್ಲ ಧರ್ಮದವರು ಒಗ್ಗೂಡಿ ಬಾಳಬೇಕು: ಸಚಿವ ಲಾಡ್

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ ಅವರು ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಸ್ವಾತಂತ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದರು.

'ದೇಶದ ಜನಸಂಖ್ಯೆಯಲ್ಲಿ ಯುವ ಜನರು ಶೇ 40ರಷ್ಟು ಇದ್ದಾರೆ. ಯುವ ಜನರು ಸಾಧನೆ ಮೆರೆದು ದೇಶಕ್ಕ ಕೊಡುಗೆ ನೀಡಬೇಕು. ದೇಶದ ಸಂಸ್ಕೃತಿ, ಏಕತೆ, ಘನತೆ ಕಾಪಾಡಬೇಕು. ಎಲ್ಲ ಧರ್ಮದವರು ಒಗ್ಗೂಡಿ ಬಾಳಬೇಕು' ಎಂದು ಸಚಿವ ಲಾಡ್ ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ, ಜಿಲ್ಲಾಧಿಕಾರಿ ಸ್ನೇಹಲ್, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಹುಬ್ಬಳ್ಳಿ-ಧಾರವಾಡ ಪೋಲೀಸ್ ಕಮಿಷನರ್ ಎನ್.ಶಶಿಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಉಪಸ್ಥಿತರಿದ್ದರು.

ಸ್ವಾತಂತ್ರ್ಯ ದಿನ: ಉಪಮುಖ್ಯಮಂತ್ರಿಯಿಂದ ಧ್ವಜಾರೋಹಣ

ತುಮಕೂರಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ನಂತರ ತೆರೆದ ವಾಹನದಲ್ಲಿ ತೆರಳಿ ತುಕಡಿಗಳ ಪರಿವೀಕ್ಷಣೆ ನಡೆಸಿದರು.

ಕಲ್ಪತರು ಮಹಿಳಾ ಪೊಲೀಸ್ ಪಡೆ, ಗಸ್ತು ಅರಣ್ಯ ಪಾಲಕರ ತಂಡ, ನಾಗರಿಕ ಪೊಲೀಸ್ ತಂಡ, ಗೃಹರಕ್ಷಕ ದಳ, ಸರ್ವೋದಯ ಎನ್.ಸಿ.ಸಿ ಬಾಲಕರ ತಂಡ, ಪೊಲೀಸ್ ವಾದ್ಯ ವೃಂದ ಸೇರಿದಂತೆ ವಿವಿಧ ತಂಡಗಳು ಕವಾಯತಿನಲ್ಲಿ ಪಾಲ್ಗೊಂಡಿದ್ದವು.

ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಇತರರು ಭಾಗವಹಿಸಿದ್ದರು.

ಭಾರತವನ್ನು ವಿಶ್ವಮಟ್ಟಕ್ಕೇರಿಸಲು ಪಣ ತೊಡಬೇಕು: ಖಾದರ್

ಸ್ವಾತಂತ್ರ್ಯಕ್ಕಾಗಿ ಒಂದು ಪೀಳಿಗೆಯವರು ತಮ್ಮ ಜೀವನವನ್ನೇ ತ್ಯಾಗ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಭಾರತವನ್ನು ವಿಶ್ವದ ಉನ್ನತ ಸ್ಥಾನಕ್ಕೇರಿಸಲು ಈಗಿನ ಪೀಳಿಗೆ ಪ್ರಯತ್ನಪಟ್ಟು ಇತಿಹಾಸವನ್ನು ಮರುಸೃಷ್ಟಿಸಬೇಕಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು.

ಚಾಮರಾಜನಗರ: ಸಚಿವ ಪುಟ್ಟರಂಗಶೆಟ್ಟಿ ಧ್ವಜಾರೋಹಣ

ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗದಲ್ಲಿ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರೇಷ್ಮೆ ಹಾಗೂ ಪಶು ಸಂಗೋಪನಾ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಗೌರವ ವಂದನೆ ಸ್ವೀಕರಿಸಿದ ಸಚಿವರು ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.

ಪೊಲೀಸ್, ಸ್ಕೌಟ್ಸ್ ಅಂಡ್ ಗೈಡ್ಸ್, ಜಿಲ್ಲಾ ಸಶಸ್ತ್ರ ಪಡೆ, ಶಾಲಾ ಕಾಲೇಜು ವಿದ್ಯಾರ್ಥಿಗಳ ಪಥ ಸಂಚಲನ ಗಮನ ಸೆಳೆಯಿತು. ಸಮಾರಂಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಬಿಂಬಿಸುವ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾತಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಎರಡು ಬಾರಿ ಧ್ವಜಾರೋಹಣ ಮಾಡಿದ ತಹಶೀಲ್ದಾರ್

ಚನ್ನಮ್ಮನ ಕಿತ್ತೂರಿನ ಐತಿಹಾಸಿಕ ಗಡಾದ ಮರಡಿ ಮೇಲೆ ಶನಿವಾರ ನಡೆದ 80ನೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕಲಗೌಡ ಪಾಟೀಲ ಎರಡು ಬಾರಿ ಧ್ವಜಾರೋಹಣ ಮಾಡಿದ ಘಟನೆ ನಡೆಯಿತು.

ರಾಯಚೂರು: ಸಚಿವ ಡಾ.ಅಜಯ್ ಸಿಂಗ್ ಧ್ವಜಾರೋಹಣ

ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯ್ ಸಿಂಗ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಬೆಳಗಾವಿ: ಜಿಲ್ಲಾ‌ ಕ್ರೀಡಾಂಗಣದಲ್ಲಿ ಧ್ವಜಾರೋಹಣ

ಬೆಳಗಾವಿ ಜಿಲ್ಲಾ‌ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು, ಸ್ವಾತಂತ್ರ್ಯ ದಿನದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಮಾಡಿದರು.

ನಂತರ ತೆರೆದ ಜೀಪಿನಲ್ಲಿ ಪಥಸಂಚಲನ ತಂಡಗಳತ್ತ ತೆರಳಿದರು.

ಶಾಸಕ ಆಸಿಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ಇತರರಿದ್ದರು.

ಮಡಿಕೇರಿ: ಐತಿಹಾಸಿಕ ಕೋಟೆ ಆವರಣದಲ್ಲಿ ಧ್ವಜಾರೋಹಣ

ಮಡಿಕೇರಿಯ ಐತಿಹಾಸಿಕ ಕೋಟೆ ಆವರಣದಲ್ಲಿ ಶನಿವಾರ ಸಚಿವ ಪಿ‌‌‌‌.ಎಂ.ನರೇಂದ್ರಸ್ವಾಮಿ ಅವರು ಸ್ವಾತಂತ್ರ್ಯ ದಿನದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.

ಶಾಸಕ ಡಾ.ಮಂತರ್ ಗೌಡ, ಭಾಗವಹಿಸಿದ್ದರು

2047ರ ವೇಳೆಗೆ 'ವಿಕಸಿತ ಭಾರತ' ನಿರ್ಮಿಸುವ ದೊಡ್ಡ ಕನಸು ಕಾಣಿರಿ: ಮೋದಿ ಕರೆ

2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ಗುರಿ ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ದೊಡ್ಡ ಕನಸನ್ನು ಕಾಣಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಾವು ಮಾಡುವ ಕೆಲಸವು, ಜಗತ್ತೇ ನಮ್ಮನ್ನು ವಿಭಿನ್ನ ರೀತಿಯಲ್ಲಿ ನೋಡುವಂತೆ ಮಾಡುತ್ತದೆ’ ಎಂದು ಹುರಿದುಂಬಿಸಿದ್ದಾರೆ.

ಕೆಂಪುಕೋಟೆ ಆವರಣದಲ್ಲಿ ಮೊಳಗಿತು 'ವಂದೇ ಮಾತರಂ'

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ 'ವಂದೇ ಮಾತರಂ' ಹಾಡಲಾಯಿತು.

ಹೊಸ ಸಂಕಲ್ಪದೊಂದಿಗೆ ಮುನ್ನಡೆಯೋಣ: ಮೋದಿ

ದೇಶದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ದೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ನಾವಿಂದು ಅತ್ಯಂತ ಸಂಭ್ರಮದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಇಂದು ದೇಶದ ಮೂಲೆ ಮೂಲೆಯಲ್ಲೂ 'ವಂದೇ ಮಾತರಂ' ಜಯಘೋಷ ಮೊಳಗುತ್ತಿದೆ. ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ‘ವಂದೇ ಮಾತರಂ’ ಅನುರಣಿಸುತ್ತಿದೆ. ಪ್ರತಿಯೊಂದು ಮನೆಯಲ್ಲೂ ರಾಷ್ಟ್ರಧ್ವಜ ರಾರಾಜಿಸುತ್ತಿದ್ದು, ಪ್ರತಿಯೊಬ್ಬರ ಮನದಲ್ಲೂ ತ್ರಿವರ್ಣ ಪ್ರೇಮ ಮನೆಮಾಡಿದೆ. ನಾವು ಹೊಸ ಸಂಕಲ್ಪ ತೊಟ್ಟು, ಅಪಾರ ಉತ್ಸಾಹದೊಂದಿಗೆ ಮುನ್ನಡೆಯೋಣ‘ ಎಂದು ಪ್ರಧಾನಿ ಹೇಳಿದರು.

ಕೆಂಪುಕೋಟೆಯಲ್ಲಿ ಧ್ವಜಾರೋಹಣ 

ರಾಷ್ಟ್ರ ರಾಜಧಾನಿಯಲ್ಲಿರುವ ಕೆಂಪು ಕೋಟೆ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.

ಮಹಾತ್ಮ ಗಾಂಧಿ ಸ್ಮಾರಕದಲ್ಲಿ ಮೋದಿ

ದೆಹಲಿಯಲ್ಲಿ ಬಿಗಿ ಭದ್ರತೆ

ಪ್ರಧಾನಿ ಭಾಷಣಕ್ಕೆ ಕೆಂಪುಕೋಟೆ ಸಜ್ಜು

ಸಿಂಗ್ ನಿವಾಸದಲ್ಲಿ ಧ್ವಜಾರೋಹಣ

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ದೆಹಲಿಯಲ್ಲಿರುವ ತಮ್ಮ ನಿವಾಸದ ಎದುರು ಧ್ವಜಾರೋಹಣ ನೆರವೇರಿಸಿದರು.

ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಜನರು ದೆಹಲಿಯ ಕೆಂಪು ಕೋಟೆಯತ್ತ ಹೆಜ್ಜೆ ಇಟ್ಟಿದ್ದಾರೆ.

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನಿವಾಸದಲ್ಲಿ ಧ್ವಜಾರೋಹಣ

ಸ್ವಾತಂತ್ರ್ಯ ಎಂಬುದು ನಿರಂತರ ಹೊಣೆಗಾರಿಕೆ: ಡಿ.ಕೆ ಶಿವಕುಮಾರ್‌

‘ಸ್ವಾತಂತ್ರ್ಯ ಎಂಬುದು ಅಸಂಖ್ಯಾತ ಹೋರಾಟಗಾರರ ತ್ಯಾಗ-ಬಲಿದಾನಗಳ ಮೇಲೆ ಕಟ್ಟಲಾದ ಪ್ರಜಾಪ್ರಭುತ್ವದ ನಿರಂತರ ಹೊಣೆಗಾರಿಕೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ನಾಡಿನ ಸಮಸ್ತ ಜನತೆಗೆ ಶುಭಾಶಯ ತಿಳಿಸಿ, ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ವ್ಯಕ್ತಿಗಳಿಗಿಂತ ವ್ಯವಸ್ಥೆಯೂ, ಆಡಳಿತಕ್ಕಿಂತ ಸಾರ್ವಜನಿಕರ ಹಿತಾಸಕ್ತಿಯೂ ಆದ್ಯತೆಯಾಗಬೇಕು ಎಂಬ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತಾ, ಸಮಾಜದ ಕಟ್ಟಕಡೆಯ ಪ್ರಜೆಗೂ ಘನತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯ ದೊರಕಿಸಿಕೊಡುವುದೇ ನವಭಾರತಕ್ಕೆ ನಾವು ನೀಡಬಹುದಾದ ಮಹತ್ತರವಾದ ಕೊಡುಗೆ’ ಎಂದು ಹೇಳಿದ್ದಾರೆ.

‘ವೈವಿಧ್ಯತೆಯೇ ನಮ್ಮ ದೇಶದ ಬಲ, ಸಾಮರಸ್ಯವೇ ನಮ್ಮ ಜೀವಾಳ. ಯಾವುದೇ ಭೇದ-ಭಾವಗಳಿಲ್ಲದೆ ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ಸಂರಕ್ಷಿಸಿ, ಸರ್ವರಿಗೂ ಉತ್ತಮ ಬದುಕು ಕಲ್ಪಿಸುವುದೇ ನಮ್ಮ ಸರ್ಕಾರದ ಪ್ರಮುಖ ಧ್ಯೇಯ. ನಾವೆಲ್ಲರೂ ಸೇರಿ ಸಮೃದ್ಧವಾದ, ಜಗತ್ತೇ ತಿರುಗಿ ನೋಡುವಂತಹ ಕರ್ನಾಟಕವನ್ನು ಕಟ್ಟಲು ಈ ಶುಭದಿನದಂದು ಸಂಕಲ್ಪ ತೊಡೋಣ’ ಎಂದು ಕರೆ ನೀಡಿದ್ದಾರೆ.

80ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಶುಭಾಶಯ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಧೈರ್ಯ, ತ್ಯಾಗ ಮತ್ತು ಅಚಲ ಬದ್ಧತೆಯೊಂದಿಗೆ ವಸಾಹತುಶಾಹಿ ಆಳ್ವಿಕೆಗೆ ಅಂತ್ಯ ಹಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರನ್ನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇವೆ. 'ವಿಕಸಿತ ಭಾರತ'ದ ನಿರ್ಮಾಣಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತಿರುವ ಹೊತ್ತಿನಲ್ಲಿ, ಆ ಎಲ್ಲ ವೀರರ ಕನಸುಗಳೂ ನಮಗೆ ನಿರಂತರವಾಗಿ ಪ್ರೇರಣೆ ನೀಡುತ್ತವೆ’ ಎಂದಿದ್ದಾರೆ.

ಮುಂದುವರಿದು, ‘140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದೊಂದಿಗೆ, ದೇಶವು ಇಂದು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯ ಹೊಸ ಶಿಖರವನ್ನು ಏರುತ್ತಿದೆ. ಪ್ರಗತಿಯ ಈ ಪಯಣವು ಮುಂದಿನ ದಿನಗಳಲ್ಲಿ ಮತ್ತಷ್ಟು ಚುರುಕು ಪಡೆಯಲಿದೆ’ ಎಂದು ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ