
Karnataka Rains: ಆಗುಂಬೆಯಲ್ಲಿ ಉತ್ತಮ, ಜಿಲ್ಲಾವಾರು ಮಳೆ ಪ್ರಮಾಣದ ವಿವರ
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಉತ್ತಮ ಮಳೆಯಾಗಿದೆ. ಇದಲ್ಲದೇ ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಚೆನ್ನಾಗಿಯೇ ಮಳೆಯಾಗಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಕಳೆದ 24 ಗಂಟೆಯ ಮಳೆ ಮಾಹಿತಿ ಪ್ರಕಾರ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಬೇಗಾರಿನಲ್ಲಿ 87.5 ಮಿ.ಮೀ, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ 85 ಮಿ.ಮೀ, ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ತಾಲ್ಲೂಕಿನ ನೀಲಕುಂದದಲ್ಲಿ 80.5 ಮಿ.ಮೀ ಮಳೆಯಾಗಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿರುನಾಣಿಯಲ್ಲಿ 74.5 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಉಜಿರೆಯಲ್ಲಿ 60 ಮಿ.ಮೀ, ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಹೆಬ್ರಿಯಲ್ಲಿ 58 ಮಿ.ಮೀ, ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಪರವಾಡದಲ್ಲಿ 42.5 ಮಿ.ಮೀ ಮಳೆಯಾಗಿದೆ.
ಚಾಮರಾಜನಗರ ತಾಲ್ಲೂಕು ಹರವೆಯಲ್ಲಿ 28 ಮಿ.ಮೀ, ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಹೊಗಡಹಳ್ಳದಲ್ಲಿ 27.5 ಮಿ.ಮೀ, ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲ್ಲೂಕಿನಲ್ಲಿ25 ಮಿ.ಮೀ, ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಟಿ.ದೊಡ್ಡಪುರದಲ್ಲಿ 23 ಮಿ.ಮೀ, ಚಿಕ್ಕಬಳ್ಳಾಪುರ ತಾಲ್ಲೂಕು ಚಿಂತಾಮಣಿ ತಾಲ್ಲೂಕಿನ ಬುರುಡಗುಂಟೆ ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮಾರೇಹಳ್ಳಿಯಲ್ಲಿ ತಲಾ 20 ಮಿ.ಮೀ ಮಳೆಯಾಗಿದೆ.
ಕಲಬುರಗಿ ಜಿಲ್ಲೆ ಅಳಂದ ತಾಲ್ಲೂಕಿನ ಅಳಂಗದಲ್ಲಿ 16.5 ಮಿ.ಮೀ, ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಪರಟಾಪುರ, ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ಕೊಣ್ಣೂರು ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕು ಪಗಡದಿನ್ನಿಯಲ್ಲಿ ತಲಾ 14.5 ಮಿ.ಮೀ, ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ 14 ಮಿ.ಮೀ ಮಳೆಯಾಗಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲ್ಲೂಕಿನ ಅತ್ತಿಗೆರೆಯ ಹಾಗೂ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕೊಪ್ಪದಲ್ಲಿ ತಲಾ 13 ಮಿ.ಮೀ, ದಾವಣಗೆರೆ ಜಿಲ್ಲೆ ಮಾಯಕೊಂಡದಲ್ಲಿ 10.5 ಮಿ.ಮೀ, ಯಾದಗಿರಿ ಜಿಲ್ಲೆ ಶೋರಾಪುರ ತಾಲ್ಲೂಕಿನ ಪೆತಂಪೂರದಲ್ಲಿ 10 ಮಿ.ಮೀ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ, ಬೆಂಗಳೂರು ನಗರದ ಅರಕೆರೆ,. ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ತಿರ್ಲಾಪುರ ತಲಾ 9 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರಿನಲ್ಲಿ 7.5 ಮಿ.ಮೀ, ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಹಿರೇಬಿಡನಾಳ, ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ತಲಾ 7 ಮಿ.ಮೀ, ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲ್ಲೂಕಿನ ಬೆಳಗುಂಬ, ವಿಜಯನಗರ ಜಿಲ್ಲೆ ಹಡಗಲಿ ತಾಲ್ಲೂಕಿನ ಹೊಳಲಿನಲ್ಲಿ 5.5 ಮಿ.ಮೀ, ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಸೊನ್ನವಾಡಿಯಲ್ಲಿ 3 ಮಿ.ಮೀ ಮಳೆಯಾಗಿದೆ.