Karnataka Rains: ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿಂದು ಭಾರಿ ಮಳೆ ಸೂಚನೆ

Karnataka Rains: ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿಂದು ಭಾರಿ ಮಳೆ ಸೂಚನೆ

Karnataka Rains: ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿಂದು ಭಾರಿ ಮಳೆ ಸೂಚನೆ

ಬೆಂಗಳೂರು: ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು 24 ಗಂಟೆಗಳ ಹವಾಮಾನ ಮುನ್ಸೂಚನೆ ಮಾಹಿತಿ ಬಿಡುಗಡೆ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಅಥವಾ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಎರಡೂ ಜಿಲ್ಲೆಗಳಲ್ಲೂ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ, ತುಮಕೂರು, ಕೊಡಗು, ಹಾಸನ ಮತ್ತು ವಿಜಯನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಕೇಂದ್ರ ತಿಳಿಸಿದೆ.

ಇದಲ್ಲದೇ ಆಗಸ್ಟ್‌ 7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗಲಿದ್ದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ