
Karnataka Rains: ಆಗುಂಬೆಯಲ್ಲಿ ಉತ್ತಮ ಮಳೆ; ಮಲೆನಾಡು, ಕರಾವಳಿ ಭಾಗದಲ್ಲಿ ಅಧಿಕ
ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುವ ಆಗುಂಬೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಹೆಚ್ಚಿನ ಮಳೆಯಾಗಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ 57 ಮಿ.ಮೀ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಧರೆಕೊಪ್ಪದಲ್ಲಿ 55.5 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಕಳ್ಳಿಗೆಯಲ್ಲಿ 50 ಮಿ.ಮೀ, ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲ್ಲೂಕಿನ ಕೋನಾರದಲ್ಲಿ 44 ಮಿ.ಮೀ ಮಳೆಯಾಗಿದೆ.
ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಉಳ್ಳೂರಿನಲ್ಲಿ 37 ಮಿ.ಮೀ, ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಬರಗೂರಿನಲ್ಲಿ 31.5 ಮಿ.ಮೀ, ಬೆಳಗಾವಿ ತಾಲ್ಲೂಕಿನ ಮಸ್ತಮರಡಿಯಲ್ಲಿ 25.5 ಮಿ.ಮೀ, ಕೊಡಗು ಜಿಲ್ಲೆ ಭಾಗಮಂಡಲದಲ್ಲಿ 22 ಮಿ.ಮೀ ಮಳೆಯಾಗಿದೆ,
ದಾವಣಗೆರೆ ತಾಲ್ಲೂಕಿನ ಮತ್ತಿಯಲ್ಲಿ 13.5 ಮಿ.ಮೀ, ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ದೇವಪುರದಲ್ಲಿ 11 ಮಿ.ಮೀ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಹಾರೋಹಳ್ಳಿಯಲ್ಲಿ 8.5 ಮಿ.ಮೀ, ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ 8 ಮಿ.ಮೀ, ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬ್ಯಾಕರವಳ್ಳಿಯಲ್ಲಿ 7 ಮಿ.ಮೀ, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಘಂಟುಂವಾರಪಲ್ಲಿಯಲ್ಲಿ 6.5 ಮಿ.ಮೀ ಮಳೆಯಾಗಿದೆ.
ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಹಿರೇಚರಕುಣಿ, ಬೆಂಗಳೂರು ನಗರದ ದೊಡ್ಡತೋಗೂರು, ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲ್ಲೂಕಿನ ಕಲರಿಕಾವಲ್‌ನಲ್ಲಿ ತಲಾ 6 ಮಿ.ಮೀ, ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಕ್ಯಾದಗೆರೆಯಲ್ಲಿ 5 ಮಿ.ಮೀ, ಬೀದರ್ ತಾಲ್ಲೂಕಿನ ಬರೂರು ಹಾಗೂ ಮೈಸೂರು ಜಿಲ್ಲೆ ಎಚ್‌ಡಿಕೋಟೆ ತಾಲ್ಲೂಕಿನ ಭೀಮನಹಳ್ಳಿಯಲ್ಲಿ ತಲಾ 4.5 ಮಿ.ಮೀ ಮಳೆಯಾಗಿದೆ.
ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಗೋಲಗೇರಿಯಲ್ಲಿ 4 ಮಿ.ಮೀ, ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಕೊಲ್ಲೂರಿನಲ್ಲಿ 3.5 ಮಿ.ಮೀ, ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಧನ್ನೂರು ಹಾಗೂ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕಿನ ನಂದಿಹಳ್ಳಿಯಲ್ಲಿ ತಲಾ 3 ಮಿ.ಮೀ, ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಕುಡಿಯನೂರು, ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಗೆದ್ದಿಗೆರೆ ಹಾಗೂ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲ್ಲೂಕಿನ ರಾವಿಹಾಳದಲ್ಲಿ ತಲಾ 2.5 ಮಿ.ಮೀ ಮಳೆಯಾಗಿದೆ.
ಕಲಬುರಗಿ ಜಿಲ್ಲೆ ಯಡ್ರಾಮಿ ತಾಲ್ಲೂಕಿನ ಕುರ್ಲಗೇರದಲ್ಲಿ 2 ಮಿ.ಮೀ, ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನ ಶಿಂಗಟಾಲೂರ, ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಹೊನ್ನೂರಿನಲ್ಲಿ ತಲಾ 1 ಮಿ.ಮೀ ಹಾಗೂ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಅರಣಿಯಲ್ಲಿ 0.5 ಮಿ.ಮೀ ಮಳೆಯಾಗಿದೆ.