
Karnataka Rains: ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆ, ಯಾವ ಜಿಲ್ಲೆಯಲ್ಲಿ ಎಷ್ಟು
ಬೆಂಗಳೂರು: ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಘಟಕ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಬೆಳ್ಳೂರಿನಲ್ಲಿ 75.5 ಮಿ.ಮೀ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲ್ಲೂಕಿನ ಬೆಲ್ಕೆಯಲ್ಲಿ 59.5 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಸುಬ್ರಹ್ಮಣ್ಯದಲ್ಲಿ 59 ಮಿ.ಮೀ, ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಂಪಾಜೆಯಲ್ಲಿ 56 ಮಿ.ಮೀ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲ್ಲೂಕಿನ ತೋಟದೂರು ಹಾಗೂ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಮಾಲದಲ್ಲಿ ತಲಾ 41 ಮಿ,ಮೀ, ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಕಣಕುಂಬಿಯಲ್ಲಿ 32 ಮಿ.ಮೀ, ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಅರಳಕೇರಿ ಹಾಗು ಬೆಂಗಳೂರು ನಗರದ ಮಂಟಪದಲ್ಲಿ ತಲಾ 23 ಕಿ.ಮೀ ಮಳೆಯಾಗಿದೆ.
ತುಮಕೂರು ತಾಲ್ಲೂಕಿನ ಸ್ವದೇನಹಳ್ಳಿಯಲ್ಲಿ 22, ಮೈಸೂರು ನಗರದ ಕೂರ್ಗಳ್ಳಿಯಲ್ಲಿ 21.5 ಮಿ.ಮೀ, ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆಯಲ್ಲಿ 20.5 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನ ಬೊಮ್ಮೇನಹಳ್ಳಿಯಲ್ಲಿ 18.5 ಮಿ.ಮೀ ಮಳೆಯಾಗಿದೆ.
ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ತಿರ್ಲಾಪುರದಲ್ಲಿ 17.5 ಮಿ.ಮೀ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಭಕ್ತರಹಳ್ಳಿಯಲ್ಲಿ 17 ಮಿ.ಮೀ, ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹರಕನಾಳಿನಲ್ಲಿ 16 ಮಿ.ಮೀ ಹಾಗೂ ಹಾವೇರಿ ತಾಲ್ಲೂಕಿನ ನಾಗನೂರಿನಲ್ಲಿ 14 ಮಿ.ಮೀ ಮಳೆಯಾಗಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಹಾನವಾಲಿನಲ್ಲಿ 12.5 ಮಿ.ಮೀ, ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಬಳ್ಳುರಗಿಯಲ್ಲಿ 8 ಮಿ.ಮೀ, ಹಾಸನ ಜಿಲ್ಲೆ ಅರಸಿಕೆರೆ ತಾಲ್ಲೂಕಿನ ಜಾಜೂರು ಹಾಗೂ ರಾಯಚೂರು ಜಿಲ್ಲೆ ಲಿಂಗಸಗೂರು ತಾಲ್ಲೂಕಿನ ನಾಗಳಾಪುರದಲ್ಲಿ ತಲಾ 8.5 ಮಿ.ಮೀ, ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹೊರೆಯಾಲದಲ್ಲಿ 8 ಮಿ.ಮೀ, ಚಿಕ್ಕಬಳ್ಳಾಪುರ ತಾಲ್ಲೂಕು ಚಿಂತಾಮಣಿ ತಾಲ್ಲೂಕಿನ ಶೆಟ್ಟಿಹಳ್ಳಿಯಲ್ಲಿ 7 ಮಿ.ಮೀ ಮಳೆಯಾಗಿದೆ.
ಗದಗ ಜಿಲ್ಲೆ ರೋಣ ತಾಲ್ಲೂಕಿನ ಕುರಡಗಿಯಲ್ಲಿ 6.5 ಮಿ.ಮೀ, ಯಾದಗಿರಿ ಜಿಲ್ಲೆ ಶೋರಾಪುರ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಚಿಕ್ಕಾನಕನಹಳ್ಳಿ, ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕುರೆಕುಪ್ಪ, ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ನಂದವಾಡಗಿ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲ್ಲೂಕಿನ ಕೆಂಚನಕುಪ್ಪೆಯಲ್ಲಿ ತಲಾ 6 ಮಿ.ಮೀ, ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಬಿ.ಕೆ.ಮಸಳಿ ಗ್ರಾಮದಲ್ಲಿ 5.5 ಮಿ.ಮೀ ಹಾಗೂ ಬೀದರ್ ತಾಲ್ಲೂಕಿನ ಯದ್ಲಾಪುರದಲ್ಲಿ 4 ಮಿ.ಮೀ ಮಳೆಯಾಗಿದೆ.