
Karnataka Rains: ಉಡುಪಿ ಭಾಗದಲ್ಲಿ ಉತ್ತಮ ಮಳೆ, ಈ ಜಿಲ್ಲೆಗಳಲ್ಲಿ ಅತ್ಯಲ್ಪ
ಬೆಂಗಳೂರು: ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಉತ್ತಮ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅತ್ಯಲ್ಪ ಮಳೆಯಾಗಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಕಳೆದ 24 ಗಂಟೆ ಅವಧಿಯ ಮಳೆ ವಿವರವನ್ನು ಬಿಡುಗಡೆ ಮಾಡಿದೆ.
ಉಡುಪಿ ಜಿಲ್ಲೆ ಬ್ರಹ್ಮಾವರ ತಾಲ್ಲೂಕಿನ ಕುಂಜಾಲುವಿನಲ್ಲಿ 107.5 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಬೆಳಂದೂರಿನಲ್ಲಿ 89.5 ಮಿ.ಮೀ, ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಪರವಾಡದಲ್ಲಿ 63.5 ಮಿ.ಮೀ ಮಳೆಯಾಗಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ 53 ಮಿ.ಮೀ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಚಂಬುವಿನಲ್ಲಿ 49 ಮಿ.ಮೀ, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ದೊಡ್ಮನೆಯಲ್ಲಿ 45 ಮಿ.ಮೀ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ನಿಡುವಾಲೆಯಲ್ಲಿ 43 ಮಿ.ಮೀ ಮಳೆಯಾಗಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ಹಾಗೂ ಕೊಪ್ಪಳ ತಾಲ್ಲೂಕಿನ ಹಿರೇಸಿಂದೋಗಿಯಲ್ಲಿ ತಲಾ 37 ಮಿ.ಮೀ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ 36 ಮಿ.ಮೀ, ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಅಲ್ಕೋಡಿನಲ್ಲಿ 32.5 ಮಿ.ಮೀ ಮಳೆಯಾಗಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ನಿಡಸಾಲೆಯಲ್ಲಿ 26 ಮಿ.ಮೀ, ಮೈಸೂರು ತಾಲ್ಲೂಕಿನ ಮರಟಿಕ್ಯಾತನಹಳ್ಳಿಯಲ್ಲಿ 24.5 ಮಿ.ಮೀ, ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ 20 ಮಿ.ಮೀ, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಲ್ಲನಕುಪ್ಪೆಯಲ್ಲಿ 19 ಮಿ.ಮೀ, ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ನರಸಿಂಗಪುರದಲ್ಲಿ 18.5 ಮಿ.ಮೀ, ಯಾದಗಿರಿ ಜಿಲ್ಲೆ ಶೋರಾಪುರ ತಾಲ್ಲೂಕಿನ ಬರದೇವನಾಳ್‌ನಲ್ಲಿ 17.5 ಮಿ.ಮೀ, ಗದಗ ತಾಲ್ಲೂಕಿನ ಲಕ್ಕುಂಡಿಯಲ್ಲಿ 16.5 ಮಿ,ಮೀ ಮಳೆಯಾಗಿದೆ.
ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬರದೇನಹಾಳದಲ್ಲಿ 16.5 ಮಿ.ಮೀ, ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಮಳಗುಂದದಲ್ಲಿ 15 ಮಿ.ಮೀ, ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ದೇಶಾವರಲ್ಲೊ 14.5 ಮಿ.ಮೀ, ಬಾಗಲಕೋಟೆ ಗುಳೇದಗುಡ್ಡ ತಾಲ್ಲೂಕಿನ ನಾಗರಾಳದಲ್ಲಿ 13.5 ಮಿಮೀ ಮಳೆಯಾಗಿದೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿ ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ನಾಗರಾಳದಲ್ಲಿ ತಲಾ 13 ಮಿ.ಮೀ ಮಳೆಯಾಗಿದೆ.