
Karnataka Rains:ಉತ್ತರಕನ್ನಡ ಸೇರಿ ಕೆಲ ಜಿಲ್ಲೆಯಲ್ಲಿ ಉತ್ತಮ ಮಳೆ, ಎಲ್ಲಿ ಎಷ್ಟು
ಬೆಂಗಳೂರು: ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ ಸಹಿತ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ನೀಲಕುಂದಲ್ಲಿ 88.5 ಮಿ.ಮೀ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕರಿಮನೆಯಲ್ಲಿ 73.75 ಮಿ.ಮೀ, ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕು ಹೆಂಗವಳ್ಳಿಯಲ್ಲಿ 62 ಮಿ.ಮೀ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಬಿಸಿಲೆರೆಯಲ್ಲಿ 61.5 ಮಿ. ಮೀ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಶಿರಾಡಿಯಲ್ಲಿ 61 ಮಿ.ಮೀ, ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಪಡುವಾರಿಯಲ್ಲಿ 60.5 ಮಿ,ಮೀ ,ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ 60.2 ಮಿ.ಮೀ ಮಳೆಯಾಗಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಅಂಡಗಧುಂಧೂರು ಹಾಗೂ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಕೆರೆಯಲ್ಲಿ 59.5 ಮಿ.ಮೀ, ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಸಿದ್ದಾಪುರದಲ್ಲಿ 59 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಸಂಪಾಜೆಯಲ್ಲಿ 58.5 ಮಿ.ಮೀ, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ವಾಜಗೋಡಿನಲ್ಲಿ 58 ಮಿ.ಮೀ ಮಳೆಯಾಗಿದೆ.
ಉಡುಪಿಯ ಬಡಗುಬೆಟ್ಟುವಿನಲ್ಲಿ 57 ಮಿ.ಮೀ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೈರಕುಂದದಲ್ಲಿ 56.5 ಮಿ.ಮೀ, ಕೊಡಗು ಜಿಲ್ಲೆಯ ಸಂಪಾಜೆ ಹಾಗೂ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ವಾರಂಗ ಹಾಗೂ ಕೋಡಿಬೆಟ್ಟುವಿನಲ್ಲಿ ತಲಾ 56 ಮಿ.ಮೀ, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ಹಾರ್ಸಿಕಟ್ಟಾದಲ್ಲಿ 55.5 ಮಿ.ಮೀ, ಉಡುಪಿ ಜಿಲ್ಲೆಯ ಅಮಾಸೆಬೈಲು, ಅಂಪಾರುವಿನಲ್ಲಿ 55.5 ಮಿ.ಮೀ, ಕುಮಟಾ ತಾಲ್ಲೂಕಿನ ಸೊಪ್ಪಿನಹಳ್ಳಿಯಲ್ಲಿ 51.5 ಮಿ.ಮೀ, ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ, ಕಾರ್ಕಳದಲ್ಲಿ 51.4 ಮಿ.ಮೀ, ತೀರ್ಥಹಳ್ಳಿ ತಾಲ್ಲೂಕಿನ ಹೊನ್ನೆತಾಳು, ಹೊಸಹಳ್ಳಿ, ಭಟ್ಕಳ ತಾಲ್ಲೂಕಿನ ಮುಂಡಳ್ಳಿಯಲ್ಲಿ ತಲಾ 51 ಮಿ.ಮೀ ಮಳೆಯಾಗಿದೆ.