Photos: ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸ್ವೀಕರಿಸಿದ ರಾಜ್ಯದ 9 ಸಾಧಕರು

Photos: ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸ್ವೀಕರಿಸಿದ ರಾಜ್ಯದ 9 ಸಾಧಕರು

Photos: ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸ್ವೀಕರಿಸಿದ ರಾಜ್ಯದ 9 ಸಾಧಕರು

ನವದೆಹಲಿ: ಹಿರಿಯ ಮೃದಂಗ ವಾದಕ ಎ.ವಿ.ಆನಂದ್‌ (ಅಕಾಡೆಮಿ ರತ್ನ ಪ್ರಶಸ್ತಿ), ನಿರ್ದೇಶಕ ಟಿ.ಎಸ್‌.ನಾಗಾಭರಣ ಸೇರಿದಂತೆ ಕರ್ನಾಟಕದ ಒಂಬತ್ತು ಸಾಧಕರು ಕೇಂದ್ರ ಸಂಗೀತ ನಾಟಕ ಅಕಾಡೆಮಿಯ 2024 ಮತ್ತು 2025ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಸ್ವೀಕರಿಸಿದರು.ಇಲ್ಲಿನ ಭಾರತೀಯ ವಿಜ್ಞಾನ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ರಾಜ್ಯಗಳ 115 ಕಲಾವಿದರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು.

ಯಕ್ಷಗಾನ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ, ಕರ್ನಾಟಕ ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ ಕೆ.ವಾಗೀಶ್‌, ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಟಿ.ಎಸ್‌.ಸತ್ಯವತಿ, ಕೂಚಿಪುಡಿ ನೃತ್ಯ ಕಲಾವಿದೆ ವೀಣಾ ಮೂರ್ತಿ ವಿಜಯ್‌, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ (ರುದ್ರವೀಣೆ) ಕಲಾವಿದೆ ಜ್ಯೋತಿ ಹೆಗಡೆ, ಹಿರಿಯ ಮೃದಂಗ ವಾದಕ ಅನೂರು ಆರ್‌.ಅನಂತಕೃಷ್ಣ ಶರ್ಮಾ, ಜಾನಪದ ಸಂಗೀತ ವಿಭಾಗದಲ್ಲಿ ಎಸ್.ಸಿ.ಶರ್ಮಾ ಪ್ರಶಸ್ತಿ ಸ್ವೀಕರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260814-51-1046948180

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ