
Toxic Trailer: ಟಾಕ್ಸಿಕ್ ಟ್ರೇಲರ್ ಬಿಡುಗಡೆ ಅಭಿಮಾನಿಗಳಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಯಶ್, ಹೊಸದೇನಿದೆ
Toxic Trailer: ಇಡೀ ಭಾರತವೇ ಎದುರು ನೋಡುತ್ತಿರುವ ನಟ ಯಶ್ ಹಾಗೂ ಬಹುತಾರಾಗಣದ ಟಾಕ್ಸಿಕ್ (Toxic) ಟ್ರೇಲರ್ ಲಾಂಚ್ ಆಗಿದೆ. ಬೆಂಗಳೂರಿನ ಎಎಂಬಿ ಮಾಲ್‌ನಲ್ಲಿ ಬಹು ನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಆಗಿದೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಖ್ಯಾತಿ ಗಳಿಸಿರುವ ಕನ್ನಡಿಗ ಯಶ್ ಅವರ ಈ ಸಿನಿಮಾ ನೋಡುವುದಕ್ಕೆ ಅವರ ಅಭಿಮಾನಿಗಳು ವರ್ಷಗಳಿಂದ ಕಾಯುತ್ತಿದ್ದಾರೆ.
ಆಗಸ್ಟ್ 8ರ ಶನಿವಾರ ಬಹು ನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟ್ರೇಲರ್ ಇದೀಗ ರಿಲೀಸ್ ಆಗಿದೆ. ಟಾಕ್ಸಿಕ್ ಸಿನಿಮಾದಲ್ಲಿ ನಟಿ ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್, ಸುದೇವ್ ನಾಯರ್, ಕಿಯಾರಾ ಅಡ್ವಾನಿ ಹಾಗೂ ವಿವೇಕ್ ಒಬೆರಾಯ್ ಅವರು ಸೇರಿದಂತೆ ಹಲವು ಪ್ರಮುಖ ನಟ - ನಟಿಯರು ಅಭಿನಯಿಸಿದ್ದಾರೆ. ಟ್ರೇಲರ್ ಹೇಗಿದೆ, ಇದಕ್ಕೆ ಜನರ ರಿಯಾಕ್ಷನ್ ಹೇಗಿತ್ತು ಎನ್ನುವ ಸಂಪೂರ್ಣ ವಿವರ ಈ ಲೇಖನದಲ್ಲಿದೆ.
Toxic Trailer: ಹೇಗಿದೆ ಟಾಕ್ಸಿಕ್ ಟ್ರೇಲರ್ ?
ಬಹು ನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟ್ರೇಲರ್ ಅದ್ಧೂರಿಯಾಗಿದೆ. ಟ್ರೇಲರ್ 4.38 ನಿಮಿಷವಿದೆ.
ನಟ ಯಶ್ ಅವರು ಇದರಲ್ಲಿ ಪವರ್‌ಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ರಾಯಾ ಆಗಿ ನಟ ಯಶ್ ಅವರು ಟಾಕ್ಸಿಕ್ ಸಿನಿಮಾದಲ್ಲಿ ಮಿಂಚಿದ್ದಾರೆ. ಸಣ್ಣ ವಯಸ್ಸಿನಿಂದಲೇ ಕ್ರೈಮ್ ಲೋಕದಲ್ಲಿ ಬಾಲಕನೊಬ್ಬ ತನ್ನ ಹೆಜ್ಜೆಗಳನ್ನು ಇರಿಸುವಂತೆ ಟಾಕ್ಸಿಕ್ ಟ್ರೇಲರ್‌ನಲ್ಲಿ ತೋರಿಸಲಾಗಿದೆ. ದೊಡ್ಡ ಗ್ಯಾಂಗ್ ಸ್ಟಾರ್ ಆಗಿ ನಟ ಯಶ್ ಅವರು ಟಾಕ್ಸಿಕ್ ಸಿನಿಮಾದಲ್ಲಿ ಮಿಂಚಿದ್ದಾರೆ. ನಟ ಯಶ್ ಅವರು ಈ ಸಿನಿಮಾದಲ್ಲಿ ಡಬಲ್ ರೋಲ್‌ನಲ್ಲಿ ಕಾಣಿಸಿಕೊಂಡಿರುವುದು ಬಹುತೇಕ ಖಚಿತವಾಗಿದೆ. ನಿನ್ನ ಕೊನೆಯ ಆಸೆ ಏನು ಎಂದು ಎದುರಾಳಿ ಕೇಳುವ ಪ್ರಶ್ನೆಗೆ ಯಶ್ ಅಷ್ಟೇ ರೋಚಕವಾಗಿ ರಿಪ್ಲೈ ಕೊಟ್ಟಿದ್ದಾರೆ.
ರಾಯ ಹಾಗೂ ರೂಮಿಯಾಗಿ ನಟ ಯಶ್ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಡಬಲ್ ರೋಲ್ ಅಥವಾ ಡಬಲ್ ಶೆಡ್ ಪಾತ್ರವೇ ಎನ್ನುವ ಕುತೂಹಲವನ್ನು ಉಳಿಸಿಕೊಳ್ಳಲಾಗಿದೆ. ಯಾವ ಹೆಣ್ಣಿನ ಮೋಹಕ್ಕೂ ಬೀಳದ ವ್ಯಕ್ತಿ ಎನ್ನುವಂತೆ ರಾಯ ಪಾತ್ರವನ್ನು ತೋರಿಸಲಾಗಿದೆ. ಈ ಸಿನಿಮಾದಲ್ಲಿ ಐವರು ನಟಿಯರು ಸಹ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಒಬ್ಬ ಮಗ ಮತ್ತು ವಿಲನ್ ತಂದೆಯ ನಡುವೆ ಸೆಣಸಾಟದಂತೆ ಟ್ರೇಲರ್‌ನಲ್ಲಿನ ದೃಶ್ಯಗಳು ಇವೆ.
Toxic Trailer: ಕರ್ನಾಟಕದಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆ
ಟಾಕ್ಸಿಕ್ ಸಿನಿಮಾ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆವಿಎನ್ ಪ್ರೊಡಕ್ಷನ್ಸ್‌ಗೆ ಯಶ್ ಅವರ ಹೋಮ್ ಬ್ಯಾನರ್ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹ ಕೈ ಜೋಡಿಸಿದೆ. ಭಾರತ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಈ ಸಿನಿಮಾ ಭಾರೀ ಸದ್ದು ಮಾಡಿದೆ. ಇದೀಗ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ವೀಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ಬಂದಿದೆ. ಸಿನಿಮಾದ ಟ್ರೇಲರ್ ಬಿಡುಗಡೆಗೆ ಸಂಬಂಧಿಸಿದಂತೆ ಶನಿವಾರ ಬೆಳಿಗ್ಗೆಯಿಂದಲೇ ಭಾರೀ ಕುತೂಹಲ ಮೂಡಿತ್ತು. ಸೋಶಿಯಲ್ ಮೀಡಿಯಾಗಳಲ್ಲಿ ಟಾಕ್ಸಿಕ್ ಟಾಪಿಕ್ ಟ್ರೆಂಡ್ ಸೃಷ್ಟಿ ಮಾಡಿತ್ತು.
ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಾಗೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇದೆ. ಪ್ರೀಮಿಯರ್ ಪ್ರೊಡಕ್ಷನ್ ಹೌಸ್‌ಗಳು ಕೆವಿಎನ್‌ನ ಪ್ರಬಲ ಸ್ಥಳೀಯ ವಿತರಣಾ ಜಾಲವನ್ನು ಬಳಸಿಕೊಳ್ಳಲು ಉದ್ದೇಶಿಸಿವೆ. ಕೆಜಿಎಫ್ ಫ್ರಾಂಚೈಸಿ ಈ ಹಿಂದೆ ಸ್ಥಾಪಿಸಿದ ಎಲ್ಲಾ ದಾಖಲೆಗಳನ್ನು ಮುರಿಯಬಹುದಾದ ದೊಡ್ಡ ಅವಕಾಶ ಟಾಕ್ಸಿಕ್‌ಗೆ ಇದೆ ಎಂದು ಹೇಳಲಾಗುತ್ತಿದೆ.
ಇನ್ನು ಈ ಸಿನಿಮಾ ದೊಡ್ಡ ಬಜೆಟ್‌ನಲ್ಲಿ ಮೂಡಿ ಬಂದಿದೆ. ವೆಂಕಟ್ ಕೆ. ನಾರಾಯಣ ಮತ್ತು ಯಶ್ ಇಬ್ಬರು ಈ ಸಿನಿಮಾಗೆ ನಿರ್ಮಾಪಕರಾಗಿದ್ದಾರೆ. ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ಈ ಸಿನಿಮಾವನ್ನು ನಿರ್ದೇಶಿಸಿದ್ದು, ಪ್ಯಾನ್-ವರ್ಲ್ಡ್ ಗ್ಯಾಂಗ್‌ಸ್ಟರ್ ಥ್ರಿಲ್ಲರ್ ಕಥಾಹಂದರವನ್ನು ಈ ಸಿನಿಮಾ ಒಳಗೊಂಡಿದೆ. ಅಲ್ಲದೆ ಟಾಕ್ಸಿಕ್ ಸಿನಿಮಾವೂ ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಸಿನಿಮಾಗಳಲ್ಲಿ ಒಂದಾಗಿದೆ.
ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದ್ದು. ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್ ಮಾಡಲಾಗಿದೆ. ಟಾಕ್ಸಿಕ್ ಸಿನಿಮಾವನ್ನು ಜಾಗತಿಕ ಪ್ರೇಕ್ಷಕರನ್ನು ಗುರಿಯಾಗಿಸಿಕೊಂಡು ನಿರ್ಮಿಸಲಾಗಿದೆ.
ವೆಂಕಟ್ ಕೆ. ನಾರಾಯಣ ಮತ್ತು ಯಶ್ ಅವರು ನಿರ್ಮಾಪಕರಾಗಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್‌ಗಳ ಅಡಿಯಲ್ಲಿ ನಿರ್ಮಿಸಲಾಗಿದೆ. ಯಶ್ ಅವರೊಂದಿಗೆ ನಟಿಯರಾದ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರು ಅಭಿನಯಿಸಿದ್ದಾರೆ. ಟಾಕ್ಸಿಕ್ ಸಿನಿಮಾ ಆಗಸ್ಟ್ 26ಕ್ಕೆ ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ನೋಡುವುದಕ್ಕೆ ದೇಶದಾದ್ಯಂತ ಯಶ್ ಅವರ ಅಭಿಮಾನಿಗಳು ಬೆರಗುಗಣ್ಣಿನಿಂದ ಕಾಯುತ್ತಿದ್ದಾರೆ.