Toxic: ಟ್ರೇಲರ್ ಬಿಡುಗಡೆಗೆ ಬೆಂಗಳೂರಿಗೆ ಬಂದ ‘ಟಾಕ್ಸಿಕ್’ ಬೆಡಗಿಯರು

Toxic: ಟ್ರೇಲರ್ ಬಿಡುಗಡೆಗೆ ಬೆಂಗಳೂರಿಗೆ ಬಂದ ‘ಟಾಕ್ಸಿಕ್’ ಬೆಡಗಿಯರು

Toxic: ಟ್ರೇಲರ್ ಬಿಡುಗಡೆಗೆ ಬೆಂಗಳೂರಿಗೆ ಬಂದ ‘ಟಾಕ್ಸಿಕ್’ ಬೆಡಗಿಯರು

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ಬಿಡುಗಡೆಗೆ ಸಜ್ಜಾಗಿದೆ. ಅದಕ್ಕೂ ಮೊದಲು ಇಂದು (ಆ.8) ಕಪಾಲಿ ಎಎಂಬಿ ಸಿನಿಮಾಸ್‌ನಲ್ಲಿ ಚಿತ್ರತಂಡ ಟ್ರೇಲರ್ ಬಿಡುಗಡೆ ಮಾಡುತ್ತಿದೆ.

ಟಾಕ್ಸಿಕ್ ಚಿತ್ರದ ಟ್ರೇಲರ್ ಇಂದು ಸಂಜೆ 7:01ಕ್ಕೆ ಬಿಡುಗಡೆಯಾಗಲಿದೆ. ಹೀಗಾಗಿ ಇಡೀ ಸಿನಿಮಾ ತಂಡ ಬೆಂಗಳೂರಿನತ್ತ ಮುಖ ಮಾಡಿದೆ. ಟಾಕ್ಸಿಕ್‌ ಸಿನಿಮಾದಲ್ಲಿ ಅಭಿನಯಿಸಿರುವ ನಟ–ನಟಿಯರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ್ದಾರೆ.

ಬಾಲಿವುಡ್ ನಟ ಅಕ್ಷಯ್, ಸುದೇವ್ ನಾಯರ್, ನಟಿಯರಾದ ರುಕ್ಮಿಣಿ ವಸಂತ್, ನಯನತಾರಾ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ಹುಮಾ ಖುರೇಷಿ, ನಿರ್ದೇಶಕಿ ಗೀತು ಮೋಹನ್‌ದಾಸ್ ಕೂಡ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ರಾಜಧಾನಿಗೆ ಬಂದಿದ್ದಾರೆ.

ಗೀತು ಮೋಹನ್‌ದಾಸ್‌ ಅವರು ನಿರ್ದೇಶಿಸಿರುವ ಟಾಕ್ಸಿಕ್ ಸಿನಿಮಾ ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಏಕಕಾಲದಲ್ಲಿ ನಿರ್ಮಾಣವಾಗಿದೆ. ಈ ಚಿತ್ರವು ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗೂ ಡಬ್ಬಿಂಗ್ ಆಗಿದ್ದು, ಕೆವಿಎನ್‌ ಪ್ರೊಡಕ್ಷನ್ಸ್, ಮಾನ್‌ಸ್ಟಾರ್ ಮೈಂಡ್ ಕ್ರಿಯೇಷನ್ಸ್‌ ಚಿತ್ರವನ್ನು ನಿರ್ಮಾಣ ಮಾಡಿದೆ.

ಇಂದು ಸಂಜೆ 7:01ಕ್ಕೆ ಬಿಡುಗಡೆಯಾಗಲಿರುವ ‘ಟಾಕ್ಸಿಕ್’ ಸಿನಿಮಾದ ಟ್ರೇಲರ್‌ ಕಣ್ತುಂಬಿಕೊಳ್ಳಲು ಜಾಗತಿಕ ಮಟ್ಟದಲ್ಲಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ