ಹಾಸನ: ಹೇಮಾವತಿ ಜಲಾಶಯದಿಂದ 10 ದಿನಗಳಲ್ಲಿ 5 ಟಿಎಂಸಿ ಅಡಿಗೂ ಅಧಿಕ ನೀರು ಖಾಲಿ

ಹಾಸನ: ಹೇಮಾವತಿ ಜಲಾಶಯದಿಂದ 10 ದಿನಗಳಲ್ಲಿ 5 ಟಿಎಂಸಿ ಅಡಿಗೂ ಅಧಿಕ ನೀರು ಖಾಲಿ

ಹಾಸನ: ಹೇಮಾವತಿ ಜಲಾಶಯದಿಂದ 10 ದಿನಗಳಲ್ಲಿ 5 ಟಿಎಂಸಿ ಅಡಿಗೂ ಅಧಿಕ ನೀರು ಖಾಲಿ

ಹಾಸನ: ಜಿಲ್ಲೆಯ ಜೀವನಾಡಿಯಾಗಿರುವ ಗೊರೂರು ಹೇಮಾವತಿ ಜಲಾಶಯದಿಂದ ನಿರಂತರವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದ್ದು, ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದೇ ವೇಳೆ ಜಿಲ್ಲೆಯ ಬಹುತೇಕ ಕೆರೆ-ಕಟ್ಟೆಗಳಿಗೆ ನೀರು ಹರಿಯದೇ ಇರುವುದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ರೈತರಲ್ಲಿ ಮೂಡಿದೆ.

ಆ.25ರಿಂದ ಸೆ.3ರವರೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ಹೇಮಾವತಿ ಜಲಾಶಯದಿಂದ ಒಟ್ಟು 61,575 ಕ್ಯುಸೆಕ್ ನೀರು ಹೊರಬಿಡಲಾಗಿದೆ. ಇದು ಅಂದಾಜು 5.32 ಟಿಎಂಸಿ ಅಡಿಯಷ್ಟು ನೀರು ಜಲಾಶಯದಿಂದ ಹರಿದು ಹೋಗಿದೆ.

ಪ್ರಸ್ತುತ ಮುಖ್ಯ ನದಿಗೆ 4 ಸಾವಿರ ಕ್ಯುಸೆಕ್‌, ಎಡದಂಡೆ ನಾಲೆಗೆ 4 ಸಾವಿರ ಕ್ಯುಸೆಕ್‌, ಬಲದಂಡೆ ನಾಲೆಗೆ 400 ಕ್ಯುಸೆಕ್‌, ಹೇಮಾವತಿ ಹೈಲೆವೆಲ್ ಕಾಲುವೆಗೆ 400 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ.

ಸೆ.3ರ ಬೆಳಗಿನ ಮಾಹಿತಿಯಂತೆ, ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2,922 ಅಡಿ ಇದ್ದು, ಪ್ರಸ್ತುತ ನೀರಿನ ಮಟ್ಟ 2,911.20 ಅಡಿ ಇದೆ. ಒಟ್ಟು ಸಂಗ್ರಹ ಸಾಮರ್ಥ್ಯ 37.103 ಟಿಎಂಸಿ ಅಡಿ ಇದ್ದರೂ, ಪ್ರಸ್ತುತ ಸಂಗ್ರಹ 27.598 ಟಿಎಂಸಿ ಅಡಿ ಇದೆ. ಜಲಾಶಯಕ್ಕೆ ಸದ್ಯ 4,220 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 8,630 ಕ್ಯುಸೆಕ್ ಒಳಹರಿವು ಇತ್ತು. ಈ ಬಾರಿ ಸುಮಾರು 4,410 ಕ್ಯುಸೆಕ್ ಒಳಹರಿವು ಕಡಿಮೆಯಾಗಿದೆ.

ಕಳೆದ ವರ್ಷ ಸೆ.3ರಂದು ಜಲಾಶಯದ ನೀರಿನ ಮಟ್ಟ 2,921.90 ಅಡಿ ಆಸುಪಾಸಿನಲ್ಲಿದ್ದರೆ, ಈ ಬಾರಿ 2,911.20 ಅಡಿಗೆ ಇಳಿಕೆಯಾಗಿದೆ.

ತುಮಕೂರಿಗೆ ನೀರು: ಹೇಮಾವತಿ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುತ್ತಿರುವುದರಿಂದ, ಅದರ ಬಹುಪಾಲು ತುಮಕೂರು ಭಾಗಕ್ಕೆ ಹರಿದು ಹೋಗುತ್ತಿದೆ. ಇದರಿಂದ ಹಾಸನ ಜಿಲ್ಲೆಯ ಹಲವು ಗ್ರಾಮಗಳ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ತೊಂದರೆಯಾಗುತ್ತಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೇಮಾವತಿ ಜಲಾಶಯ ನಮ್ಮ ಜಿಲ್ಲೆಯ ಪ್ರಮುಖ ನೀರಿನ ಮೂಲವಾಗಿದೆ. ಈಗಾಗಲೇ ಜಲಾಶಯದ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಇದೇ ರೀತಿ ಪ್ರತಿದಿನ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಟ್ಟರೆ ಮುಂದಿನ ದಿನಗಳಲ್ಲಿ ಹಾಸನ ನಗರ ಸೇರಿ ಜಿಲ್ಲೆಯ ಹಲವು ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಜಿಲ್ಲೆಯ ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ನೀರಾವರಿ ಅಗತ್ಯದ ಜೊತೆಗೆ ಮೊದಲು ಜಿಲ್ಲೆಯ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಭದ್ರತೆ ಕಲ್ಪಿಸಬೇಕು. ಕೆರೆ-ಕಟ್ಟೆಗಳಿಗೆ ನೀರು ಹರಿಸುವ ಮೂಲಕ ಅಂತರ್ಜಲ ಮಟ್ಟ ಕಾಪಾಡುವ ಅಗತ್ಯವಿದೆ ಎಂದು ಜನರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260904-36-895919900

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ