
ತುಮಕೂರು: ಇಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
ತುಮಕೂರು: ಬೆಸ್ಕಾಂ ಗ್ರಾಮೀಣ ಉಪ ವಿಭಾಗ– 1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿದ್ದು, ಸೆ. 19ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯ ವರೆಗೆ ಊರುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ, ಸುತ್ತಮುತ್ತಲಿನ ಪ್ರದೇಶಗಳ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ಕಡಿತ: ಬೆಸ್ಕಾಂ ನಗರ ಉಪವಿಭಾಗ– 1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಸೆ. 19ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಪ್ರದೇಶಗಳು: ರಂಗಾಪುರ, ಲಿಂಗಾಪುರ, ಬಾಲಾಜಿ ಲೇಔಟ್, ಅಣ್ಣೇನಹಳ್ಳಿ, ತಿಮ್ಮಲಾಪುರ, ಹೆಬ್ಬಾಕ, ಊರುಕೆರೆ ಕರೇಕಲ್ಲು ಮತ್ತು ಸುತ್ತಮುತ್ತಲಿನ ಪ್ರದೇಶಗಳು.