ಶತಕದ ಪಥ– ಪ್ರಗತಿಯ ರಥ | 100 ದಿನಗಳು.. ಇದು ಕೇವಲ ಆರಂಭವಷ್ಟೇ: ಸಿಎಂ ಡಿಕೆಶಿ

ಶತಕದ ಪಥ– ಪ್ರಗತಿಯ ರಥ | 100 ದಿನಗಳು.. ಇದು ಕೇವಲ ಆರಂಭವಷ್ಟೇ: ಸಿಎಂ ಡಿಕೆಶಿ

ಶತಕದ ಪಥ– ಪ್ರಗತಿಯ ರಥ | 100 ದಿನಗಳು.. ಇದು ಕೇವಲ ಆರಂಭವಷ್ಟೇ: ಸಿಎಂ ಡಿಕೆಶಿ

ಬೆಂಗಳೂರು: ನಿಮ್ಮ ಸಂಕಷ್ಟಗಳನ್ನು ಆಲಿಸಲು, ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಲು ನನ್ನ ‘ಹಸ್ತ’ ಸದಾ ಮುಂದಿರಲಿದೆ. ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಶಕ್ತ ಕರ್ನಾಟಕವನ್ನು ನಿರ್ಮಿಸುವುದೇ ನನ್ನ ಸಂಕಲ್ಪ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಇಂದಿಗೆ (ಸೆ. 10) 100 ದಿನಗಳು ಪೂರ್ಣಗೊಂಡಿವೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಪ್ರಜಾಸೇವಕನಾಗಿ ನಿಮ್ಮ ಸೇವೆ ಮಾಡಲು ನನಗೆ ಅವಕಾಶ ದೊರೆತು ಇಂದಿಗೆ ನೂರು ದಿನಗಳು. ನಾಡಿನ ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಬದಲಾವಣೆ ತರಲು ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ ದಿನಗಳು. ದೃಢ ಕರ್ನಾಟಕದ ಕನಸು ನನಸು ಮಾಡಲು ಈ ನೂರು ದಿನಗಳಲ್ಲಿ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದೇವೆ’ ಎಂದಿದ್ದಾರೆ.

ಮುಂದುವರಿದು, ಕರುನಾಡಿನ ಜನತೆಯ ಋಣ ತೀರಿಸಲು, ನಿಮ್ಮ ಜೀವನ ಮಟ್ಟವನ್ನು ಸುಧಾರಿಸಲು, ನಿಮ್ಮ ಮನೆಯ ಮಗನಾಗಿ ಸದಾ ನಿಮ್ಮ ಸೇವೆಗೆ ಸಿದ್ಧನಿದ್ದೇನೆ ಎಂದಿದ್ದಾರೆ.

100 ದಿನಗಳು.. ಇದು ಕೇವಲ ಆರಂಭವಷ್ಟೇ..

ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ ಜನರ ಜೀವನಮಟ್ಟ ಸುಧಾರಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ, ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವುದೇ ನಮ್ಮ ಸಂಕಲ್ಪವಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಮುನ್ನಡೆಯೋಣ  ಎಂದೂ ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ದಿನ ನೂರು - ಸಾಧನೆ ಜೀರೋ..!! 

ಸಿಎಂ ಆಗಿ ನೂರು ದಿನಗಳನ್ನು ಪೂರೈಸಿ, ಜೀರೋ ಸಾಧನೆಯನ್ನು ಮಾಡಿರುವ ಡಿ.ಕೆ.ಶಿವಕುಮಾರ್  ಅವರಿಗೆ ಅಭಿನಂದನೆಗಳು ಎಂದು ಬಿಜೆಪಿ ಕುಟುಕಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ