ಗಡುವು ಅಂತ್ಯ, ಇಂದಿನಿಂದಲೇ 108 ಆ್ಯಂಬುಲೆನ್ಸ್ ಮುಷ್ಕರ: ಸಿಬ್ಬಂದಿ ಬೇಡಿಕೆಗಳೇನು?

ಗಡುವು ಅಂತ್ಯ, ಇಂದಿನಿಂದಲೇ 108 ಆ್ಯಂಬುಲೆನ್ಸ್ ಮುಷ್ಕರ: ಸಿಬ್ಬಂದಿ ಬೇಡಿಕೆಗಳೇನು?

ಗಡುವು ಅಂತ್ಯ, ಇಂದಿನಿಂದಲೇ 108 ಆ್ಯಂಬುಲೆನ್ಸ್ ಮುಷ್ಕರ: ಸಿಬ್ಬಂದಿ ಬೇಡಿಕೆಗಳೇನು?

ಬೆಂಗಳೂರು: ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಗಿದರೂ ಬೇಡಿಕೆಗಳು ಈಡೇರದ ಹಿನ್ನೆಲೆ ಇಂದು (ಸೆ.22) ರಾತ್ರಿ 8 ಗಂಟೆಯಿಂದ 108 ಆ್ಯಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಿ, ಸಾಮೂಹಿಕ ರಾಜೀನಾಮೆ ನೀಡಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರ್ಧರಿಸಿದ್ದಾರೆ.

ವಾರ್ಷಿಕ ವೇತನ ಪರಿಷ್ಕರಣೆ, ಏಕರೂಪ ವೇತನ ಹಾಗೂ ಅಪಘಾತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆ್ಯಂಬುಲೆನ್ಸ್ ನೌಕರರು ಆಗ್ರಹಿಸಿದ್ದರು.

ಆ್ಯಂಬುಲೆನ್ಸ್ ನೌಕರರು ನೀಡಿದ್ದ 15 ದಿನಗಳ ಗಡುವು ಮುಗಿದರೂ ಆರೋಗ್ಯ ಇಲಾಖೆ ಹಾಗೂ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ. ಹಾಗಾಗಿ ನೌಕರರು ಆಕ್ರೋಶಗೊಂಡಿದ್ದಾರೆ. ಬೇಡಿಕೆ ಈಡೇರದಿದ್ದರೆ 108 ಆ್ಯಂಬುಲೆನ್ಸ್ ಸೇವೆಯನ್ನು ಸಂಪೂರ್ಣವಾಗಿ ಬಂದ್​​ ಮಾಡುವುದರ ಜೊತೆಗೆ ಸಾಮೂಹಿಕ ರಾಜೀನಾಮೆಗೂ ನಿರ್ಧರಿಸಿದ್ದಾರೆ.

ಆ್ಯಂಬುಲೆನ್ಸ್ ಸಿಬ್ಬಂದಿಯ ನಿರ್ಧಾರದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತುರ್ತು ಆರೋಗ್ಯ ಸೇವೆಯಲ್ಲಿ ಏರುಪೇರಾಗಿ, ಆರೋಗ್ಯದ ತುರ್ತು ಪರಿಸ್ಥಿತಿ ಉಂಟಾಗುವ ಸಾಧ್ಯತೆ ಎದುರಾಗಿದೆ.

108 ಆ್ಯಂಬುಲೆನ್ಸ್ ನೌಕರರ ಪ್ರಮುಖ ಬೇಡಿಕೆಗಳು:

  • ಪ್ರತಿ ವರ್ಷ ವಾರ್ಷಿಕ ವೇತನ ಹೆಚ್ಚಳದೊಂದಿಗೆ ವೇತನ ಪರಿಷ್ಕರಣೆ ಮಾಡಬೇಕು.

  • ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ವಾಹನಗಳ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು.

  • ವಲಯವಾರು ವೇತನ ನಿಗದಿ ವ್ಯವಸ್ಥೆಯನ್ನು ರದ್ದುಪಡಿಸಿ, ಎಲ್ಲರಿಗೂ ಏಕರೂಪ ವೇತನ ಜಾರಿಗೊಳಿಸಬೇಕು.

  • ಜೇಷ್ಠತೆಯ ಆಧಾರದ ಮೇಲೆ ಸಿಬ್ಬಂದಿಗೆ ವೇತನ ನಿಗದಿಪಡಿಸಬೇಕು.

  • ಕಾರ್ಮಿಕ ಇಲಾಖೆಯ ನಿಯಮಾವಳಿ ಪ್ರಕಾರ ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನ ಪಾವತಿಸಬೇಕು.

  • ಕರ್ತವ್ಯದ ವೇಳೆ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು.

  • ಸಿಬ್ಬಂದಿಗೆ ಸೂಕ್ತ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸಬೇಕು.

  • ಕರ್ತವ್ಯದ ಶಿಫ್ಟ್ ಸಮಯವನ್ನು ಬದಲಾವಣೆ ಮಾಡಬೇಕು.

ಪ್ರತಿ ವರ್ಷ ವಾರ್ಷಿಕ ವೇತನ ಹೆಚ್ಚಳದೊಂದಿಗೆ ವೇತನ ಪರಿಷ್ಕರಣೆ ಮಾಡಬೇಕು.

ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ವಾಹನಗಳ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು.

ವಲಯವಾರು ವೇತನ ನಿಗದಿ ವ್ಯವಸ್ಥೆಯನ್ನು ರದ್ದುಪಡಿಸಿ, ಎಲ್ಲರಿಗೂ ಏಕರೂಪ ವೇತನ ಜಾರಿಗೊಳಿಸಬೇಕು.

ಜೇಷ್ಠತೆಯ ಆಧಾರದ ಮೇಲೆ ಸಿಬ್ಬಂದಿಗೆ ವೇತನ ನಿಗದಿಪಡಿಸಬೇಕು.

ಕಾರ್ಮಿಕ ಇಲಾಖೆಯ ನಿಯಮಾವಳಿ ಪ್ರಕಾರ ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನ ಪಾವತಿಸಬೇಕು.

ಕರ್ತವ್ಯದ ವೇಳೆ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು.

ಸಿಬ್ಬಂದಿಗೆ ಸೂಕ್ತ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸಬೇಕು.

ಕರ್ತವ್ಯದ ಶಿಫ್ಟ್ ಸಮಯವನ್ನು ಬದಲಾವಣೆ ಮಾಡಬೇಕು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ