ನೇಪಾಳ ‍ಪ್ರವಾಹ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ, 5 ಸಾವಿರ ಮಂದಿ ನಾಪತ್ತೆ

ನೇಪಾಳ ‍ಪ್ರವಾಹ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ, 5 ಸಾವಿರ ಮಂದಿ ನಾಪತ್ತೆ

ನೇಪಾಳ ‍ಪ್ರವಾಹ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ, 5 ಸಾವಿರ ಮಂದಿ ನಾಪತ್ತೆ

ಕಠ್ಮಂಡು: ನೇಪಾಳಕ್ಕೆ ಅಪ್ಪಳಿಸಿದ ವಿನಾಶಕಾರಿ ಹಠಾತ್ ಪ್ರವಾಹದಲ್ಲಿ ಸಾವಿಗೀಡಾದವರ ಸಂಖ್ಯೆ 1,127ಕ್ಕೆ ಏರಿಕೆಯಾಗಿದೆ, ಸುಮಾರು 5 ಸಾವಿರ ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಚಿತ್ವನ್‌ನಲ್ಲಿ 348, ನವಲ್‌ಪರಾಸಿ ಪೂರ್ವದಲ್ಲಿ 217, ನವಲ್‌ಪರಾಸಿ ಪಶ್ಚಿಮದಲ್ಲಿ 190 ಮತ್ತು ನುವಾಕೋಟ್‌ನಲ್ಲಿ 155 ಮೃತದೇಹಗಳು ಪತ್ತೆಯಾಗಿವೆ. ಅದೇ ರೀತಿ, ಗೋರ್ಖಾದಲ್ಲಿ 66, ಧಾದಿಂಗ್‌ನಲ್ಲಿ 59, ರಸುವಾದಲ್ಲಿ 45 ಮತ್ತು ತನಹುನ್‌ನಲ್ಲಿ 38 ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ತೆಯಾದ ಮೃತದೇಹಗಳ ಪೈಕಿ 1,113ರ ಮರಣೋತ್ತರ ಪರೀಕ್ಷೆ ಮತ್ತು ಕಾನೂನುಬದ್ಧ ಗುರುತಿನ ಪ್ರಕ್ರಿಯೆ ಪೂರ್ಣಗೊಂಡಿದೆ. 95 ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುರುತು ಪತ್ತೆಯಾಗದ 911 ಮೃತದೇಹಗಳ ವಿವರಗಳನ್ನು ನೇಪಾಳ ಪೊಲೀಸರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಇದುವರೆಗೆ ಭದ್ರತಾ ಪಡೆಗಳು ಪ್ರವಾಹ ಪೀಡಿತ ಪ್ರದೇಶಗಳಿಂದ 6,541 ಮಂದಿಯನ್ನು ರಕ್ಷಿಸಿದ್ದು, ಇನ್ನೂ 4,858 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ, ಪರಿಹಾರ ಕಾರ್ಯ ಹಾಗೂ ಪತ್ತೆಯಾದ ಮೃತದೇಹಗಳ ನಿರ್ವಹಣೆಗಾಗಿ 7,912 ಪೊಲೀಸ್ ಸಿಬ್ಬಂದಿಯನ್ನು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.

ಅಪಾಯದ ಪ್ರದೇಶಗಳಲ್ಲಿರುವ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು, ಅವಶೇಷಗಳಿಂದ ಮುಚ್ಚಿರುವ ರಸ್ತೆಗಳನ್ನು ತೆರವುಗೊಳಿಸುವುದು ಹಾಗೂ ಸ್ಥಳೀಯ ಆಡಳಿತ ಮತ್ತು ನಿವಾಸಿಗಳೊಂದಿಗೆ ಸಮನ್ವಯ ಸಾಧಿಸಿ ಶೋಧ, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಸುವ ಹೊಣೆ ಪೊಲೀಸರಿಗೆ ವಹಿಸಲಾಗಿದೆ.‌

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ