
ಗದಗದಲ್ಲಿ ಸೆಪ್ಟೆಂಬರ್ 11 ರಂದು ನೇರ ಸಂದರ್ಶನ ಆಯೋಜನೆ
ಗದಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಸೆಪ್ಟೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಎಮೀನೆನಟ್ ಎಚ್.ಆರ್. ಸೆಲ್ಯೂಷನ್ ಪ್ರೈ.ಲಿ,. ಕಂಪನಿಯಲ್ಲಿ ಆಪರೇಟರ್ ಹುದ್ದೆಗೆ 18 ರಿಂದ 30 ವಯೋಮಿತಿಯ ಐ.ಟಿ.ಐ ಡಿಪ್ಲೊಮಾ ಮತ್ತು ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆಯ ಅಂಕಪಟ್ಟಿ, ಸ್ವವಿವರ, ಆಧಾರ್ ಕಾರ್ಡ್ ಪ್ರತಿ ತರಬೇಕು. ನೋಂದಣಿ ಕಡ್ಡಾಯವಾಗಿರುತ್ತದೆ. ಯುವನಿಧಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 63633 30688, 96869 20883 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.