ಜಕ್ರಿಬೆಟ್ಟುವಿನಲ್ಲಿ ಸೆ. 14ರಿಂದ 23ನೇ ವರ್ಷದ ಗಣೇಶೋತ್ಸವ ಆಚರಣೆ

ಜಕ್ರಿಬೆಟ್ಟುವಿನಲ್ಲಿ ಸೆ. 14ರಿಂದ 23ನೇ ವರ್ಷದ ಗಣೇಶೋತ್ಸವ ಆಚರಣೆ

ಜಕ್ರಿಬೆಟ್ಟುವಿನಲ್ಲಿ ಸೆ. 14ರಿಂದ 23ನೇ ವರ್ಷದ ಗಣೇಶೋತ್ಸವ ಆಚರಣೆ

ಬಂಟ್ವಾಳ: ಇಲ್ಲಿನ ಜಕ್ರಿಬೆಟ್ಟು ಸಾರ್ವಜನಿಕ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಸೆ. 14ರಿಂದ 18ರತನಕ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ ಎಂದು ಸಮಿತಿ ಗೌರವಾಧ್ಯಕ್ಷ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ 5 ದಿನಗಳ ಗಣೇಶೋತ್ಸವ ಯಾವುದೇ ಜಾತಿ-ಧರ್ಮದ ಭೇದವಿಲ್ಲದೆ ಸಂಭ್ರಮದಿಂದ ಪಾಲ್ಗೊಳ್ಳುವ ಉತ್ಸವವಾಗಿದೆ ಎಂದರು.

ಸೆ. 14ರಿಂದ 17ರವರೆಗೆ ಪ್ರತಿದಿನ ಬೆಳಿಗ್ಗೆ 11.30ರಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಸೋಲೂರು ಮಠದ ವಿಖ್ಯಾತಾನಂದ ಸ್ವಾಮೀಜಿ, ಒಡಿಯೂರು ಸಂಸ್ಥಾನದ ಗುರು ದೇವಾನಂದ ಸ್ವಾಮೀಜಿ, ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ, ಕಾವೂರು ಆದಿಚುಂಚನಗಿರಿ ಸಂಸ್ಥಾನದ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಗಣ್ಯರು ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2.30ರಿಂದ ವಿವಿಧ ತಂಡಗಳಿಂದ ಭಜನೆ, ಸಂಜೆ 7.30ರಿಂದ ನೃತ್ಯ ಸಿಂಚನ, ನಾಟಕ, ತಾಳಮದ್ದಳೆ, ಯಕ್ಷಗಾನ ಬಯಲಾಟ ನಡೆಯಲಿದೆ. ಸೆ.18ರಂದು ಸಂಜೆ 6.30ರಿಂದ ಶೋಭಾಯಾತ್ರೆ ನಡೆಯಲಿ ಎಂದು ಅವರು ತಿಳಿಸಿದರು.

ಸಮಿತಿ ಅಧ್ಯಕ್ಷ ಬಿ. ಪದ್ಮಶೇಖರ ಜೈನ್, ಉಪಾಧ್ಯಕ್ಷರಾದ ಚಂದ್ರಪ್ರಕಾಶ್ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಮೋಹನ್ ಚೆಂಡ್ತಿಮಾರ್, ಕಾರ್ಯದರ್ಶಿ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಪಿಯೂಸ್ ಎಲ್. ರಾಡ್ರಿಗಸ್, ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ, ಸುಧಾಕರ ಶೆಣೈ ಖಂಡಿಗ, ಪ್ರವೀಣ ಜಕ್ರಿಬೆಟ್ಟು, ಕೆ.ಪದ್ಮನಾಭ ರೈ, ಸದಾಶಿವ ಬಂಗೇರ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ