ಹೊನ್ನಾಳಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 15ರಂದು

ಹೊನ್ನಾಳಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 15ರಂದು

ಹೊನ್ನಾಳಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 15ರಂದು

ಹೊನ್ನಾಳಿ: 2026– 27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 15ರಂದು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿ ಕಾಳಿಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 15ರಂದು ಬೆಳಿಗ್ಗೆ 9ಕ್ಕೆ ಕ್ರೀಡಾಂಗಣದಲ್ಲಿರುವ ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರನ್ನು ಮಾತ್ರ ಜಿಲ್ಲಾ ಮಟ್ಟಕ್ಕೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಕ್ರೀಡಾಪಟುಗಳು ಪ್ರತಿನಿಧಿಸುವ ತಾಲ್ಲೂಕಿನ ದೃಢೀಕರಣದ ಬಗ್ಗೆ ದಾಖಲೆಗಳನ್ನು ಸಲ್ಲಿಸಬೇಕು. ಶಾಲೆ– ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಸರ್ಕಾರದಿಂದ ಅಧಿಕೃತವಾಗಿರುವ ಇತರೆ ಗುರುತಿನ ಚೀಟಿಗಳನ್ನು ಸಲ್ಲಿಸಬಹುದಾಗಿದೆ.

ಮಾಹಿತಿಗಾಗಿ ಕ್ರೀಡಾಧಿಕಾರಿ ಕಾಳಿಂಗಪ್ಪ ಅವರ ಮೊ: 78926 41492 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ