ಹೂವಿನಹಡಗಲಿಯಲ್ಲಿ ಜಾಬ್‌ ಕಾರ್ಡ್‌ ಮೇಳ ಸೆ.15ರವರೆಗೆ ಮುಂದುವರಿಕೆ

ಹೂವಿನಹಡಗಲಿಯಲ್ಲಿ ಜಾಬ್‌ ಕಾರ್ಡ್‌ ಮೇಳ ಸೆ.15ರವರೆಗೆ ಮುಂದುವರಿಕೆ

ಹೂವಿನಹಡಗಲಿಯಲ್ಲಿ ಜಾಬ್‌ ಕಾರ್ಡ್‌ ಮೇಳ ಸೆ.15ರವರೆಗೆ ಮುಂದುವರಿಕೆ

ಹೂವಿನಹಡಗಲಿ: ತಾಲ್ಲೂಕಿನ ಎಲ್ಲ 26 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಹಮ್ಮಿಕೊಳ್ಳಲಾಗಿರುವ ವಿಬಿ ಜಿ ರಾಮ್‌ ಜಿ ಯೋಜನೆಯ ಜಾಬ್‌ ಕಾರ್ಡ್‌ ಮೇಳವು ಸೆ.15ರವರೆಗೆ ಮುಂದುವರಿಯಲಿದೆ. ಕೂಲಿಕಾರ್ಮಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪರಮೇಶ್ವರ ಹೇಳಿದರು.

ತಾಲ್ಲೂಕಿನ ವಿವಿಧ ಗ್ರಾಮಗಳ ಕಾಮಗಾರಿ ಸ್ಥಳಗಳಿಗೆ ಶುಕ್ರವಾರ ಭೇಟಿ ನೀಡಿ ಕಾರ್ಮಿಕರಿಗೆ ಮಾಹಿತಿ ನೀಡಿದ ಅವರು, ಎಲ್ಲ ಕಾರ್ಮಿಕರು ಪಂಚಾಯಿತಿಗಳಿಗೆ ಅಗತ್ಯ ದಾಖಲೆ ಸಲ್ಲಿಸಿ ಜಾಬ್ ಕಾರ್ಡ್ ಪಡೆಯಬೇಕು. ಯೋಜನೆಯನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಯೋಜನೆ ಸಹಾಯಕ ನಿರ್ದೇಶಕ ಡಿ. ವೀರಣ್ಣ ನಾಯ್ಕ ಮಾತನಾಡಿ, ‘18 ವರ್ಷ ಮೇಲ್ಪಟ್ಟ ಅಕುಶಲ ಕಾರ್ಮಿಕರು ಹೊಸ ಜಾಬ್ ಕಾರ್ಡ್ ಪಡೆಯಲು, ಚಾಲ್ತಿಯಲ್ಲಿರುವ ಕಾರ್ಡ್ ನವೀಕರಿಸಲು ಅವಕಾಶವಿದೆ. ಬರ ಇರುವುದರಿಂದ ಕಾರ್ಮಿಕರು ಬೇರೆಡೆ ವಲಸೆ ಹೋಗದೇ ತಮ್ಮ ಊರುಗಳಲ್ಲೇ ವಿಬಿ ಜಿ ರಾಮ್‌ ಜಿ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಮಾಡಬೇಕು. ಎಲ್ಲರಿಗೂ ಸಮರ್ಪಕ ಉದ್ಯೋಗ ಒದಗಿಸಲು ಯೋಜನೆ ರೂಪಿಸಿದ್ದೇವೆ’ ಎಂದು ಹೇಳಿದರು. ಸಂಯೋಜಕ ಪ್ರಕಾಶನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260906-25-270491349

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ