ಮಡಿಕೇರಿ: 1.75 ಟನ್ ಪಡಿತರ ಅಕ್ಕಿ ವಶಕ್ಕೆ ಪಡೆದ ಅಧಿಕಾರಿಗಳು

ಮಡಿಕೇರಿ: 1.75 ಟನ್ ಪಡಿತರ ಅಕ್ಕಿ ವಶಕ್ಕೆ ಪಡೆದ ಅಧಿಕಾರಿಗಳು

ಮಡಿಕೇರಿ: 1.75 ಟನ್ ಪಡಿತರ ಅಕ್ಕಿ ವಶಕ್ಕೆ ಪಡೆದ ಅಧಿಕಾರಿಗಳು

ಮಡಿಕೇರಿ: ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ವಾಹನವನ್ನು ತಡೆದ ಆಹಾರ ಇಲಾಖೆಯ ಅಧಿಕಾರಿಗಳು ಸುಮಾರು 1,750 ಕೆ.ಜಿ. ಅಕ್ಕಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಇದು ಮೇಲ್ನೋಟಕ್ಕೆ ಪಡಿತರ ಅಕ್ಕಿ ಎಂಬುದು ಕಂಡು ಬಂದಿದೆ. 25 ಕೆ.ಜಿಯ 70 ಚೀಲ ಇದೆ. ಸುಮಾರು 1,750 ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಕ್ಕಿಯನ್ನು ಮಡಿಕೇರಿಯಿಂದ ಕೊಡ್ಲಿಪೇಟೆಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬುದು ತನಿಖೆಯಿಂದ ಗೊತ್ತಾಗಿದೆ. ದಾಖಲಾತಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ಇಂದು

ಮೈಸೂರು: ಸಾರ್ವಜನಿಕರ ಅಹವಾಲು ಆಲಿಸಿ, ಪರಿಹಾರ ಕಲ್ಪಿಸುವ ‘ಪ್ರಜಾಸೇವೆ’ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಸೆ.5ರಂದು ಚಾಲನೆ ನೀಡಲಾಗುವುದು.

ಸೆ.5ರಂದು ಬೆಳಿಗ್ಗೆ 11ಕ್ಕೆ ಹುಣಸೂರು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸುವರು. ಶಾಸಕ ಜಿ.ಡಿ. ಹರೀಶ್‌ಗೌಡ ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳುವರು.

ಮೈಸೂರು: ನಗರದಲ್ಲಿ ಶೇ 70ಕ್ಕಿಂತ ಹೆಚ್ಚು ಅನಧಿಕೃತ ಕಂದಾಯ ಬಡಾವಣೆಗಳ ನಿರ್ಮಾಣವಾಗಿದ್ದು, ಇಲ್ಲಿ ನಿವೇಶನ ಖರೀದಿ ಮಾಡಿರುವ ಹಾಗೂ ಮನೆ ಕಟ್ಟಿ ವಾಸಿಸುತ್ತಿರುವವರ ಸಮಸ್ಯೆಯನ್ನು ಸರ್ಕಾರ ಬಗೆಹರಿಸಬೇಕು ಎಂದು ಜಿಲ್ಲಾ ಬಿಜೆಪಿ ವಕ್ತಾರ ಕೆ. ವಸಂತ್ ಕುಮಾರ್ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಂದಾಯ ಬಡಾವಣೆ ನಿರ್ಮಾಣ ಮಾಡುವಾಗ ಪ್ರಾಧಿಕಾರಿಗಳ ನೀತಿ ನಿಯಮ ಪಾಲಿಸಿಲ್ಲ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260905-51-1820637156

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ