ಮಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಜಾನುವಾರು ರಕ್ಷಣೆ

ಮಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಜಾನುವಾರು ರಕ್ಷಣೆ

ಮಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಜಾನುವಾರು ರಕ್ಷಣೆ

ಮಂಗಳೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಪೊಲೀಸರು ಲಾರಿಯೊಂದನ್ನು ಬೆನ್ನಟ್ಟಿ 17 ಜಾನುವಾರುಗಳನ್ನು ರಕ್ಷಿಸಿ, ಲಾರಿ ಚಾಲಕನನ್ನು ಬಂಧಿಸಿದ್ದಾರೆ.

ಹಾಸನದ ಹುಣಸಿನಕೆರೆ ರೋಡ್ ಸ್ಲಮ್ ಬೋರ್ಡ್ ವಿಶ್ವನಾಥ ನಗರದ ನಿವಾಸಿ ಸಾದಿಕ್ ಜಿ (23) ಬಂಧಿತ ಆರೋಪಿ.

‘ಮಂಗಳವಾರ ಬೆಳಿಗ್ಗೆ ಕಂಕನಾಡಿ ಠಾಣೆಯ ಪಿಎಸ್‌ಐ ತಮ್ಮ ಸಿಬ್ಬಂದಿಯೊಂದಿಗೆ ರೌಂಡ್ಸ್‌ನಲ್ಲಿದ್ದಾಗ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಣೆ ಮಾಡುತ್ತಿರುವ ಮಾಹಿತಿ ಬಂದಿದೆ. ಅಡ್ಯಾರು ಕಡೆಯಿಂದ ಮಂಗಳೂರು ನಗರಕ್ಕೆ ಬರುತ್ತಿದ್ದ ಲಾರಿಯನ್ನು ಬೆನ್ನಟ್ಟಿ, ಪಡೀಲ್ ಸಮೀಪ ತಡೆದು ನಿಲ್ಲಿಸಿದಾಗ, ಲಾರಿಯಲ್ಲಿ 17 ಜಾನುವಾರು ಪತ್ತೆಯಾಗಿವೆ. ಯಾವುದೇ ಸುರಕ್ಷತಾ ಕ್ರಮ ಪಾಲಿಸದೆ, ಹಿಂಸಾತ್ಮಕವಾಗಿ ಒಂದರ ಮೇಲೊಂದು ಕಟ್ಟಿ, ಉಸಿರಾಟಕ್ಕೂ ತೊಂದರೆಯಾಗುವ ರೀತಿಯಲ್ಲಿ ಜಾನುವಾರುಗಳನ್ನು ನಿಲ್ಲಿಸಿರುವುದು ಕಂಡು ಬಂದಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪರಾರಿಯಾಗಿರುವ ಆರೋಪಿಗಳಾದ ಸುಬಾನ್ ಮತ್ತು ರೆಹಮಾನ್ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಬಂಧಿತ ಸಾದಿಕ ಬಳಿ ಇದ್ದ ಮೊಬೈಲ್ ಫೋನ್, ಇತರ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ