
ಸಿರುಗುಪ್ಪ | ಅಕ್ರಮ ಸಾಗಾಟ: 18.50 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ
ಸಿರುಗುಪ್ಪ: ನಗರದ ಅಭಯಾಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದ ಕಾಲೋನಿ ರಸ್ತೆಯ ಮೂಲಕ ಸಿಂಧನೂರು ಕಡೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 18.50 ಕ್ವಿಂಟಲ್ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸರು ಜಪ್ತಿ ಮಾಡಿದ್ದಾರೆ.
ಟಾಟಾ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ 1,850 ಕೆ.ಜಿ. ಅಕ್ಕಿಯ ಅಂದಾಜು ಮೌಲ್ಯ ₹42,500 ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ವಾಹನ ಸಹಿತ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.