ಬೆಂಗಳೂರು: ಯಶವಂತಪುರ ಎಪಿಎಂಸಿಯಲ್ಲಿ 19 ಬಾಲಕಾರ್ಮಿಕರ ರಕ್ಷಣೆ

ಬೆಂಗಳೂರು: ಯಶವಂತಪುರ ಎಪಿಎಂಸಿಯಲ್ಲಿ 19 ಬಾಲಕಾರ್ಮಿಕರ ರಕ್ಷಣೆ

ಬೆಂಗಳೂರು: ಯಶವಂತಪುರ ಎಪಿಎಂಸಿಯಲ್ಲಿ 19 ಬಾಲಕಾರ್ಮಿಕರ ರಕ್ಷಣೆ

ಬೆಂಗಳೂರು: ಯಶವಂತಪುರ ಎಪಿಎಂಸಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲಿಸಿದ ಬೆನ್ನಲ್ಲೇ ವಿವಿಧ ಮಳಿಗೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಮುಖ್ಯಮಂತ್ರಿ ಅವರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಿಹಾರದ 13, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದ ತಲಾ ಇಬ್ಬರು, ರಾಜಸ್ಥಾನ ಹಾಗೂ ಕರ್ನಾಟಕದ ತಲಾ ಒಬ್ಬರು ಸೇರಿದಂತೆ ಒಟ್ಟು 19 ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.

ಅಂಗಡಿ ಮಾಲೀಕರಾದ ಶಹೀದ್ ಮಜೀದ್‌, ಪ್ರಕಾಶ್, ಅಮೀರ್‌, ಮೊಹಮ್ಮದ್ ಸೈಫ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅಂಗಡಿ ಮಾಲೀಕರ ವಿರುದ್ಧ ಬಾಲ ಕಾರ್ಮಿಕರ ನಿಷೇಧ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ