ಪೋಕ್ಸೊ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹ 80 ಸಾವಿರ ದಂಡ

ಪೋಕ್ಸೊ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹ 80 ಸಾವಿರ ದಂಡ

ಪೋಕ್ಸೊ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹ 80 ಸಾವಿರ ದಂಡ

ಬಂಟ್ವಾಳ: ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಮೂರು ವರ್ಷಗಳ ಹಿಂದೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 80 ಸಾವಿರ ದಂಡ ವಿಧಿಸಿದೆ.

ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಶಿಕ್ಷೆಗೆ ಗುರಿಯಾದವ. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನ್ಯಾಯಾಧೀಶ ಮಾನು ಕೆ.ಎಸ್ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಬಂಟ್ವಾಳ ನಗರ ಠಾಣಾ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಅವರು ಈ ಪ್ರಕರಣದ ತನಿಖೆ ನಡೆಸಿದ್ದರು. ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ವಾದ ಮಂಡಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

2025ರಲ್ಲಿ ಬಂಟ್ವಾಳ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಬ್ದುಲ್ ಲತಿಫ್ ಎಂಬಾತ ತನ್ನ ಬಳಿ ದುಡಿಯುತ್ತಿದ್ದ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದ.ಆದರೆ ಈ ವಿಷಯ ಅರಿತಿದ್ದ ಇಬ್ಬರು ವಿಷಯ ಮುಚ್ಚಿಟ್ಟಿದ್ದರು ಎಂಬ ಕಾರಣಕ್ಕಾಗಿ ಇಬ್ಬರು ಹಿರಿಯ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣದಲ್ಲಿ ಅವರ ಪಾತ್ರ ಇಲ್ಲದ ಕಾರಣ ಅವರ ಹೆಸರು ಕೈಬಿಡಲಾಗಿದೆ ಎಂದು ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ