
ಹರಿಹರದಲ್ಲಿ 2025–26ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭ ಇಂದು
ಹರಿಹರ: ಹೊಂಗಿರಣ ಸೇವಾ ಟ್ರಸ್ಟ್ ಹಾಗೂ ಶ್ರೀ ನಾರೇಯಣ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಸಹಯೋಗದಲ್ಲಿ ನಗರದ ವಿದ್ಯಾನಗರದ ‘ಬಿ’ ಬ್ಲಾಕ್‌ನ ಶ್ರೀ ಐರಣಿ ಮಠದ ಸಮುದಾಯ ಭವನದಲ್ಲಿ ಸೆ. 6ರಂದು ಬೆಳಿಗ್ಗೆ 11.15ಕ್ಕೆ 2025–26ನೇ ಸಾಲಿನ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ.
ಹೊಂಗಿರಣ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎನ್.ಬಿ.ವಿಜಯ ಕುಮಾರ್ ಅಧ್ಯಕ್ಷತೆ ವಹಿಸುವರು. ಶಾಸಕ ಬಿ.ಪಿ.ಹರೀಶ್ ಉದ್ಘಾಟಿಸುವರು. ರಟ್ಟಿಹಳ್ಳಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಚಾಮರಾಜ ಕಮ್ಮಾರ, ನಂದಿಗಾವಿ ಶ್ರೀನಿವಾಸ್, ಉದ್ಯಮಿ ಎನ್.ಬಿ.ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260906-43-1825780687