ಬಳ್ಳಾರಿ: 20 ಬಾಲ ಕಾರ್ಮಿಕರ ರಕ್ಷಣೆ, ಮಾಲೀಕರ ವಿರುದ್ಧ ಕ್ರಮ

ಬಳ್ಳಾರಿ: 20 ಬಾಲ ಕಾರ್ಮಿಕರ ರಕ್ಷಣೆ, ಮಾಲೀಕರ ವಿರುದ್ಧ ಕ್ರಮ

ಬಳ್ಳಾರಿ: 20 ಬಾಲ ಕಾರ್ಮಿಕರ ರಕ್ಷಣೆ, ಮಾಲೀಕರ ವಿರುದ್ಧ ಕ್ರಮ

ಬಳ್ಳಾರಿ: ಜಿಲ್ಲೆಯಾದ್ಯಂತ ಭಾನುವಾರ ಜಂಟಿ ಟಾಸ್ಕ್ ಫೋರ್ಸ್ ತಂಡ ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ವಿವಿಧ ಉದ್ದಿಮೆಗಳಲ್ಲಿದ್ದ 20 ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.

ಕಾರ್ಮಿಕ ಇಲಾಖೆ, ಪೊಲೀಸ್ ಹಾಗೂ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಈ ದಾಳಿ ನಡೆದಿದೆ. ಬಳ್ಳಾರಿಯಲ್ಲಿ 14, ಕುರುಗೋಡಿನಲ್ಲಿ 3, ಸಿರುಗುಪ್ಪದಲ್ಲಿ 2 ಹಾಗೂ ಸಂಡೂರಿನಲ್ಲಿ ಒಬ್ಬ ಮಗುವನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಬಾಲಮಂದಿರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

ಮಕ್ಕಳನ್ನು ದುಡಿಮೆಗೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮೌನೇಶ್ ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ