ಕೆಜಿಎಫ್‌ನಲ್ಲಿ ಮರಕ್ಕೆ ಬಸ್ ಡಿಕ್ಕಿ: 21 ಮಂದಿಗೆ ಗಾಯ

ಕೆಜಿಎಫ್‌ನಲ್ಲಿ ಮರಕ್ಕೆ ಬಸ್ ಡಿಕ್ಕಿ: 21 ಮಂದಿಗೆ ಗಾಯ

ಕೆಜಿಎಫ್‌ನಲ್ಲಿ ಮರಕ್ಕೆ ಬಸ್ ಡಿಕ್ಕಿ: 21 ಮಂದಿಗೆ ಗಾಯ

ಕೆಜಿಎಫ್‌: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಗುರುವಾರ ಮುಂಜಾನೆ ಕ್ಯಾಸಂಬಳ್ಳಿಯ ಪೊಲೀಸ್‌ ಠಾಣೆ ಸಮೀಪ ಬಸ್‌ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 21 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಶಾಂತಿಪುರಂನಿಂದ ಕೆಜಿಎಫ್‌ ನಗರಕ್ಕೆ ಮುಂಜಾನೆ 5.50ಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌, ಪೊಲೀಸ್ ಠಾಣೆ ಸಮೀಪ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಠಾಣೆಯ ಬಳಿ ಇರುವ ತಿರುವಿನಲ್ಲಿ ಸ್ಟೀರಿಂಗ್ ತಿರುಗಿಸುವಾಗ ಎಂಜಿನ್‌ ಭಾಗದಲ್ಲಿ ಶಬ್ದ ಬಂದಿದೆ. ಆಗ ಸ್ಟೀರಿಂಗ್ ಯಾವ ಕಡೆಯೂ ತಿರುಗಿಸಲು ಆಗದೆ, ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಚಾಲಕ ವಿಶ್ವನಾಥ್‌ ತಿಳಿಸಿದ್ದಾರೆ.

ಬಸ್‌ ಚಾಲಕ ಈ ಹಿಂದೆ ಮುಳಬಾಗಿಲು ಡಿಪೊನಲ್ಲಿದ್ದಾಗ ಬಸ್‌ ಅನ್ನು ನಿರ್ಲಕ್ಷ್ಯತನದಿಂದ ಚಾಲನೆ ಮಾಡುತ್ತಿದ್ದರು ಎಂಬ ದೂರಿನ ಮೇಲೆ ಅಮಾನತು ಮಾಡಲಾಗಿತ್ತು. ಅಮಾನತು ತೆರವು ಮಾಡಿದ ಮೇಲೆ ಅವರನ್ನು ಕೆಜಿಎಫ್‌ ಡಿಪೊಗೆ ವರ್ಗಾವಣೆ ಮಾಡಲಾಗಿದೆ ಎಂದು ಡಿಪೊ ವ್ಯವಸ್ಥಾಪಕಿ ತಿಳಿಸಿದ್ದಾರೆ.

ಎಲ್ಲಾ ಗಾಯಾಳುಗಳನ್ನು ರಾಬರ್ಟಸನ್‌ಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಇಬ್ಬರು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ಕಳುಹಿಸಲಾಗಿದೆ. ಆಸ್ಪತ್ರೆಗೆ ಶಾಸಕಿ ಎಂ.ರೂಪಕಲಾ, ಮೋಹನಕೃಷ್ಣ ಮತ್ತು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಭೇಟಿ ನೀಡಿ ಗಾಯಾಳುಗಳಿಗೆ ಸ್ವಾಂತನ ಹೇಳಿದರು.

ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ