ಭದ್ರೆಗಾಗಿ ಜಗಳೂರು ಬಂದ್ 21ರಂದು: ಬಿಜೆಪಿ

ಭದ್ರೆಗಾಗಿ ಜಗಳೂರು ಬಂದ್ 21ರಂದು: ಬಿಜೆಪಿ

ಭದ್ರೆಗಾಗಿ ಜಗಳೂರು ಬಂದ್ 21ರಂದು: ಬಿಜೆಪಿ

ಜಗಳೂರು: ಭದ್ರಾಮೇಲ್ದಂಡೆ ಯೋಜನೆಯಡಿ ನೀರು ಹರಿಸುವುದು ಹಾಗೂ ಬರಪೀಡಿತ ಪಟ್ಟಿಗೆ ತಾಲ್ಲೂಕು ಸೇರ್ಪಡೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.21 ರಂದು ಜಗಳೂರು ಬಂದ್ ಆಚರಿಸಲು ನಿರ್ಧರಿಸಲಾಗಿದೆ.

ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ ಹಾಗೂ ಎಚ್.ಪಿ. ರಾಜೇಶ್ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.

‘ತಾಲ್ಲೂಕಿನಲ್ಲಿ ಮಳೆಯ ಕೊರತೆಯಿಂದ ತೀವ್ರ ಬರಗಾಲ ಎದುರಾಗಿದೆ. ಎರಡೂ ಪಟ್ಟಿಗಳಿಂದ ಜಗಳೂರು ತಾಲ್ಲೂಕನ್ನು ಕೈಬಿಡಲಾಗಿದೆ. ಹರಿಹರ, ಚನ್ನಗಿರಿ, ದಾವಣಗೆರೆ ತಾಲ್ಲೂಕುಗಳಲ್ಲಿ ಸಮೃದ್ಧ ನೀರಾವರಿ ಸೌಲಭ್ಯ ಇದೆ. ತಾಲ್ಲೂಕಿನಲ್ಲಿ ಕೂಲಿಕಾರ್ಮಿಕರು ಸಾಮೂಹಿಕ ಗುಳೆ ಹೋಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಬರ ಘೋಷಣೆಯಾಗಬೇಕು’ ಎಂದು ಮಾಜಿ ಶಾಸಕ ಎಸ್.ವಿ. ರಾಮಚಂದ್ರ ಒತ್ತಾಯಿಸಿದರು.

‘ಬಂದ್‌ಗೆ ನೀರಾವರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ಮೂರನೇ ಪಟ್ಟಿಗೂ ಬರ ಘೋಷಣೆಯಾಗುವುದು ಕಷ್ಟಕರವಾಗಿದೆ. ಶಾಸಕ ಬಿ.ದೇವೇಂದ್ರಪ್ಪ ಅವರು ವಿರೋಧ ಪಕ್ಷ ಮತ್ತು ಆಡಳಿತ ಪಕ್ಷವನ್ನು ವಿಶ್ವಾಸಕ್ಕೆ ಪಡೆಯುತ್ತಿಲ್ಲ’ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ದೂರಿದರು.

ಬಿಜೆಪಿ ಮಂಡಲ ಅಧ್ಯಕ್ಷ ಎ.ಎಂ‌.ಮರುಳಾರಾಧ್ಯ, ಮುಖಂಡರಾದ ಎಚ್.ಸಿ. ಮಹೇಶ್, ಸೊಕ್ಕೆ ನಾಗರಾಜ್, ಬಿಸ್ತುವಳ್ಳಿ ಬಾಬು, ಹನುಮಂತಪ್ಪ, ಕುಬೇಂದ್ರಪ್ಪ, ಧರ್ಮನಾಯ್ಕ, ಶಿವಕುಮಾರಸ್ವಾಮಿ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ