ದೊಡ್ಡಬಳ್ಳಾಪುರ: ಹಾಲಿನ ಖರೀದಿ ದರ ಹೆಚ್ಚಳಕ್ಕೆ ಒತ್ತಾಯಿಸಿ 22ರಂದು ಪ್ರತಿಭಟನೆ

ದೊಡ್ಡಬಳ್ಳಾಪುರ: ಹಾಲಿನ ಖರೀದಿ ದರ ಹೆಚ್ಚಳಕ್ಕೆ ಒತ್ತಾಯಿಸಿ 22ರಂದು ಪ್ರತಿಭಟನೆ

ದೊಡ್ಡಬಳ್ಳಾಪುರ: ಹಾಲಿನ ಖರೀದಿ ದರ ಹೆಚ್ಚಳಕ್ಕೆ ಒತ್ತಾಯಿಸಿ 22ರಂದು ಪ್ರತಿಭಟನೆ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹10 ಹೆಚ್ಚಿಸುವಂತೆ ಒತ್ತಾಯಿಸಿ ಬಮುಲ್ ನೇತೃತ್ವದಲ್ಲಿ ಸೆ.22ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಮುಲ್ ನಿರ್ದೇಶಕ ಬಿ.ಸಿ. ಆನಂದಕುಮಾರ್ ಹೇಳಿದರು.

ನಗರದ ಬಮುಲ್ ಶಿಬಿರ ಕಚೇರಿಯಲ್ಲಿ ಮಾತನಾಡಿದ ಅವರು, ‘ಹಿಂಡಿ, ಬೂಸ, ಮೇವು ಹಾಗೂ ಸಾಗಣೆ ಸೇರಿದಂತೆ ನಿರ್ವಹಣಾ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸಕ್ತ ವರ್ಷ ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಕೊರತೆ ಎದುರಾಗಿದೆ. ಸರ್ಕಾರ ಕೂಡಲೇ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ₹35ರಿಂದ ಕನಿಷ್ಠ ₹10 ಹೆಚ್ಚಿಸಿ, ₹45 ನೀಡಬೇಕು’ ಎಂದು ಒತ್ತಾಯಿಸಿದರು.

ಸೆ. 22ರಂದು ತಾಲ್ಲೂಕಿನ ವಿವಿಧ ಗ್ರಾಮಗಳ ಎಂಪಿಸಿಎಸ್‌ಗಳ ಮೂಲಕ ರೈತರು ದೊಡ್ಡಬಳ್ಳಾಪುರ ಬಮುಲ್‌ ಶಿಬಿರ ಕಚೇರಿಗೆ ಬಂದು, ಇಲ್ಲಿಂದ ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ತಾಲ್ಲೂಕಿನ ಎಲ್ಲ ರೈತರು ಪಕ್ಷಾತೀತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ಬೆಂಗಳೂರು ಹಾಲು ಒಕ್ಕೂಟ ವ್ಯಾಪ್ತಿಯ ಸಾವಿರಾರು ರೈತರು ಹಾಗೂ ರೈತ ಮಹಿಳೆಯರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ