ಬಯಲುಸೀಮೆಗೆ ಜಲದ ಸಂಕಲ್ಪ ಸಾಕಾರ: ಸೆ.24ರಂದು ಗಂಗಾಪೂಜೆ–ಸಚಿವ ಚಲುವರಾಯಸ್ವಾಮಿ

ಬಯಲುಸೀಮೆಗೆ ಜಲದ ಸಂಕಲ್ಪ ಸಾಕಾರ: ಸೆ.24ರಂದು   ಗಂಗಾಪೂಜೆ–ಸಚಿವ ಚಲುವರಾಯಸ್ವಾಮಿ

ಬಯಲುಸೀಮೆಗೆ ಜಲದ ಸಂಕಲ್ಪ ಸಾಕಾರ: ಸೆ.24ರಂದು ಗಂಗಾಪೂಜೆ–ಸಚಿವ ಚಲುವರಾಯಸ್ವಾಮಿ

ಚಿತ್ರದುರ್ಗ: ‘ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ರಾಜ್ಯ ಸರ್ಕಾರದ ಸಂಕಲ್ಪ ಸಾಕಾರಗೊಂಡಿದೆ. ಈ ಐತಿಹಾಸಿಕ ಸಾಧನೆಯ ಸಂಕೇತವಾಗಿ ಸೆ.24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿತ್ರದುರ್ಗಕ್ಕೆ ಆಗಮಿಸಿ ಭದ್ರಾ ಜಲಕ್ಕೆ ಗಂಗಾಪೂಜೆ ನೆರವೇರಿಸಲಿದ್ದಾರೆ’ ಎಂದು ಜಲಸಂಪನ್ಮೂಲ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು.

ನಗರದ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ನಡೆಯಲಿರುವ ಬೃಹತ್‌ ಕಾರ್ಯಕ್ರಮದ ಸಿದ್ಧತೆಯನ್ನು ಭಾನುವಾರ ಪರಿಶೀಲಿಸಿ ಮಾತನಾಡಿದರು.

‘ಗಂಗಾಪೂಜೆ ಬಳಿಕ ಬೃಹತ್‌ ಸಾರ್ವಜನಿಕ ಸಮಾರಂಭ ನಡೆಯಲಿದೆ. ಈ ಕ್ಷಣ ಸರ್ಕಾರದ ಈ ಸಾಧನೆಯ ಕೈಗನ್ನಡಿಯಾಗಲಿದೆ. ಯಾವುದೇ ಇತರ ಅಭಿವೃದ್ಧಿಗೆ ಅನುದಾನವನ್ನು ಕೇಳದೆ ಕೇವಲ ಜಿಲ್ಲೆಗೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದ ದಿವಂಗತ ಸಚಿವ ಡಿ. ಸುಧಾಕರ್‌ ಅವರ ಕಳಕಳಿ ಸ್ಮರಣೀಯ. ಗಂಗಾಪೂಜೆ ಕಾರ್ಯಕ್ರಮ ಈ ಭಾಗದ ಜನರ ದಶಕಗಳ ಕನಸು ನನಸು ಮಾಡುವ ಹಾಗೂ ಹೊಸ ಇತಿಹಾಸ ನಿರ್ಮಿಸುವ ಅತ್ಯಂತ ಮಹತ್ವದ ಸಂದರ್ಭವಾಗಲಿದೆ’ ಎಂದು ಹೇಳಿದರು.

‘ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು. ಜತೆಗೆ ಟ್ರಾಫಿಕ್ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.

‘ವೇದಿಕೆಯ ಮುಂಭಾಗದ ಜನರಿಗೆ ಗಂಗಾಪೂಜೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುತ್ತದೆ. ಸುಸಜ್ಜಿತ ಊಟದ ವ್ಯವಸ್ಥೆ ಹಾಗೂ ಸುಗಮ ಪ್ರವೇಶಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಲೋಪವಿಲ್ಲದಂತೆ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ’ ಎಂದರು.

‘ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ಟೀಕೆಗಳು ವ್ಯಕ್ತವಾಗಿದ್ದರೂ, ಆ ಎಲ್ಲಾ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವ ಜೊತೆಯಲ್ಲೇ ಸರ್ಕಾರ ನೀರಾವರಿ ಯೋಜನೆಗಳಿಗೂ ಹೆಚ್ಚಿನ ಆದ್ಯತೆ ನೀಡಿದೆ’ ಎಂದು ತಿಳಿಸಿದರು.

‘ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ 3 ಟಿಎಂಸಿ ಅಡಿ ನೀರನ್ನು ಪ್ರಾಯೋಗಿಕವಾಗಿ ಹರಿಸ ಲಾಗುತ್ತಿದೆ. ಪ್ರಸಕ್ತ ವರ್ಷದ ನವೆಂಬರ್‌-ಡಿಸೆಂಬರ್‌ ಒಳಗೆ ತುಂಗಾ ನದಿಯಿಂದ 17.5 ಟಿಎಂಸಿ ಅಡಿ ನೀರನ್ನು ಲಿಫ್ಟ್‌ ಮಾಡುವ ಮೂಲಕ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಯಶಸ್ವಿಗೊಳಿಸಲು ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈಗಾಗಲೇ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ’ ಎಂದರು.

‘ಈ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರದ ಅಸಹಕಾರ ಎದ್ದು ಕಾಣುತ್ತಿದೆ. ಘೋಷಣೆ ಮಾಡಿರುವ ₹5,300 ಕೋಟಿ ಅನುದಾನವನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರವೇ ಈಗಾಗಲೇ ₹12 ಸಾವಿರ ಕೋಟಿ ಖರ್ಚು ಮಾಡಿದೆ’ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಶಿವಣ್ಣ, ಉಪಾಧ್ಯಕ್ಷ ಡಿ.ಎನ್‌.ಮೈಲಾರಪ್ಪ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌, ಜಿಲ್ಲಾಧಿಕಾರಿ ಎಸ್‌.ರಮ್ಯಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಎಚ್‌.ಸಿ.ರವೀಂದ್ರ, ಮುಖ್ಯ ಎಂಜಿನಿಯರ್‌ ರವಿಶಂಕರ್‌ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ