ರಾಮನಗರ| 2 ಗ್ರಾಮಗಳ ನಡುವೆ ವಾಗ್ವಾದ: ಡೇರಿ ಸಭೆ ಮುಂದೂಡಿಕೆ

ರಾಮನಗರ| 2 ಗ್ರಾಮಗಳ ನಡುವೆ ವಾಗ್ವಾದ: ಡೇರಿ ಸಭೆ ಮುಂದೂಡಿಕೆ

ರಾಮನಗರ| 2 ಗ್ರಾಮಗಳ ನಡುವೆ ವಾಗ್ವಾದ: ಡೇರಿ ಸಭೆ ಮುಂದೂಡಿಕೆ

ಹಾರೋಹಳ್ಳಿ: ತಾಲ್ಲೂಕಿನ ಚಿಕ್ಕಕುರುಬಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2025–26ನೇ ಸಾಲಿನ ವಾರ್ಷಿಕ ಸಭೆಯಲ್ಲಿ ಗದ್ದಲ ಉಂಟಾಯಿತು. ಎರಡು ಗ್ರಾಮಗಳ ಗುಂಪುಗಳ ನಡುವೆ ವಾಗ್ವಾದ ನಡೆದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಯಿತು.

ಈಚೆಗೆ ವಿಶೇಷಾಧಿಕಾರಿ ಡಿ.ಕೆ.ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ಚಿಕ್ಕ ಕುರುಬಳ್ಳಿ ಹಾಗೂ ದೊಡ್ಡ ಕುರುಬಳ್ಳಿ ಸದಸ್ಯರು, ಸಭೆ ನಡಾವಳಿ ನೋಟಿಸ್ ಸರಿಯಾಗಿ ತಲುಪಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಳೆದ ಎರಡು ವರ್ಷಗಳಿಂದ ರೈತರಿಗೆ ಬೋನಸ್ ನೀಡಿಲ್ಲ ಹಾಗೂ ಆಡಳಿತ ಮಂಡಳಿಗೆ ಚುನಾವಣೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವಿಚಾರವಾಗಿ ರವಿ ಸೇರಿದಂತೆ ಕೆಲವರು ಪರಸ್ಪರ ವಾಗ್ವಾದಕ್ಕಿಳಿದರು.

ಸ್ಥಳದಲ್ಲಿದ್ದ ಹಾರೋಹಳ್ಳಿ ಸಬ್ ಇನ್‌ಸ್ಪೆಕ್ಟರ್‌ ಹಾಗೂ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಎರಡೂ ಗುಂಪುಗಳನ್ನು ಸಮಾಧಾನಪಡಿಸಿದರು.

ವಿಸ್ತರಣಾಧಿಕಾರಿ ಕುಮಾರ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಶಿವಮಾದೇಗೌಡ, ಬಾಕಿ ಬೋನಸ್ ವಿತರಣೆಗೆ ಶೀಘ್ರ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ‌

ಆಡಳಿತ ಮಂಡಳಿ ಚುನಾವಣೆ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಚುನಾವಣೆ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಸಭೆ ನೋಟಿಸ್‌ ನಿಗದಿತ ಅವಧಿಯೊಳಗೆ ಸದಸ್ಯರಿಗೆ ತಲುಪಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಗ್ರಾಮದ ಮುಖಂಡ ಪುಟ್ಟಸ್ವಾಮಿ, ಸಿಬ್ಬಂದಿ ಮಹಾದೇವ, ಕುನ್ನಮರಿಗೌಡ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ