ಲೋಕ ಅದಾಲತ್: 48,678 ಪ್ರಕರಣ ಇತ್ಯರ್ಥ, ₹27.28 ಕೋಟಿ ಪರಿಹಾರ

ಲೋಕ ಅದಾಲತ್: 48,678 ಪ್ರಕರಣ ಇತ್ಯರ್ಥ, ₹27.28 ಕೋಟಿ ಪರಿಹಾರ

ಲೋಕ ಅದಾಲತ್: 48,678 ಪ್ರಕರಣ ಇತ್ಯರ್ಥ, ₹27.28 ಕೋಟಿ ಪರಿಹಾರ

​ಬೀದರ್: ‘ಸೆ. 19ರಂದು ಜಿಲ್ಲೆಯಾದ್ಯಂತ ನಡೆದ ರಾಷ್ಟೀಯ ಬೃಹತ್ ಲೋಕ ಅದಾಲತ್‌ನಲ್ಲಿ ಒಟ್ಟು 48,678 ಪ್ರಕರಣಗಳನ್ನು ಇತ್ಯರ್ಥಪಡಿಸಿ, ₹27.28 ಕೋಟಿ ಪರಿಹಾರ ಕಕ್ಷಿದಾರರಿಗೆ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಉಪಾಧ್ಯೆ ತಿಳಿಸಿದರು.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ 8,176 ಪ್ರಕರಣಗಳನ್ನು ಬಗೆಹರಿಸಿ, ₹18.04 ಕೋಟಿ ಪರಿಹಾರ ಕೊಡಿಸಲಾಗಿದೆ. 40,502 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿ, ₹9.24 ಕೋಟಿ ಕಕ್ಷಿದಾರರಿಗೆ ಪರಿಹಾರ ಒದಗಿಸಲಾಗಿದೆ. 19 ಹಿರಿಯ ನಾಗರಿಕರ ಪ್ರಕರಣಗಳನ್ನೂ ಇತ್ಯರ್ಥಪಡಿಸಲಾಗಿದೆ. ಐದು ವೈವಾಹಿಕ ವ್ಯಾಜ್ಯಗಳನ್ನು ಬಗೆಹರಿಸಿ, ರಾಜಿ ಸಂಧಾನದ ಮೂಲಕ ಒಂದು ಮಾಡಲಾಗಿದೆ. ಆ. 1ರಿಂದ ಡಿ. 30ರ ವರೆಗೆ ಜಿಲ್ಲೆಯಾದ್ಯಂತ ರಾಷ್ಟೀಯ ಮಧ್ಯಸ್ಥಿಕೆ 3.0 ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಕ್ಷಿದಾರರೂ ಇದರ ಲಾಭ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸೆ. 23ರಂದು ಜಿಲ್ಲೆಯ ಔರಾದ್ ತಾಲ್ಲೂಕಿನ ಗುಡಪಳ್ಳಿ ಗ್ರಾಮದಲ್ಲಿ 60 ದಿನಗಳ ಬೃಹತ್‌ ಕಾನೂನು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಇದರಡಿ ಈಗಾಗಲೇ ಅರೋಗ್ಯ ಶಿಬಿರ, ಪಿಂಚಣಿ ಅಭಿಯಾನ ಸಹ ಹಮ್ಮಿಕೊಳ್ಳಲಾಗಿದೆ ಎಂದರು. ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನ್ ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ