ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: 58,883 ಮಂದಿಯ ವಿಚಾರಣೆ ಪೂರ್ಣ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: 58,883 ಮಂದಿಯ ವಿಚಾರಣೆ ಪೂರ್ಣ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: 58,883 ಮಂದಿಯ ವಿಚಾರಣೆ ಪೂರ್ಣ

ಮಡಿಕೇರಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಮ್ಯಾಪಿಂಗ್ ಆಗದಿರುವ ಹಾಗೂ ಮ್ಯಾಪಿಂಗ್‍ನಲ್ಲಿ ವ್ಯತ್ಯಾಸವಾಗಿದ್ದ ಸುಮಾರು 58,883 ಮತದಾರರಲ್ಲಿ, 44,444 ಮಂದಿಯ ವಿಚಾರಣೆ ಪೂರ್ಣಗೊಂಡಿದೆ. ಇನ್ನೂ, 14,439 ಮಂದಿ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳನ್ನು ಪಡೆದು ಇಸಿಐ ನೆಟ್‍ನಲ್ಲಿ ಅಪ್‍ಲೋಡ್ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ ನೀಡಿ ಮಾಹಿತಿ ಪಡೆಯುವ ಅವಕಾಶವನ್ನು ಪಡೆದುಕೊಳ್ಳಬೇಕು. ಆ ನಿಟ್ಟಿನಲ್ಲಿ ವಿವಿಧ ರಾಜಕೀಯ ಪಕ್ಷಗಳು ಸಹಕರಿಸುವಂತೆ ಅವರು ಮನವಿ ಮಾಡಿದರು.

ಆಗಸ್ಟ್, 29 ಮತ್ತು 30 ರಂದು ನಡೆದ ವಿಶೇಷ ಅಭಿಯಾನ ಸಂದರ್ಭದಲ್ಲಿ ನಮೂನೆ 6 ರಡಿ 398 ಅರ್ಜಿಗಳು ಸಲ್ಲಿಕೆಯಾಗಿದ್ದವು, ನಮೂನೆ-7 ಮತ್ತು 8 ರಡಿ 247 ಒಟ್ಟು 652 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸೆಪ್ಟೆಂಬರ್, 19 ಮತ್ತು 20ರಂದು ನಡೆದ ವಿಶೇಷ ಅಭಿಯಾನ ಸಂದರ್ಭದಲ್ಲಿ ನಮೂನೆ-6 ರಡಿ 507 ಅರ್ಜಿಗಳು ಸಲ್ಲಿಕೆಯಾಗಿದ್ದವು, ನಮೂನೆ 7 ರಡಿ 5 ಮತ್ತು ನಮೂನೆ 8 ರಡಿ 462 ಒಟ್ಟು 954 ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ಅವರು ಮಾಹಿತಿ ನೀಡಿದರು.

ಕರಡು ಮತದಾರರ ಪಟ್ಟಿಯ ಪ್ರಕಟಣೆ ದಿನದಿಂದ(2026 ರ ಆಗಸ್ಟ್, 24 ರಿಂದ ಸೆಪ್ಟೆಂಬರ್, 23 ರವರೆಗೆ) ನಮೂನೆಯನ್ನು ಸ್ವೀಕರಿಸಲಾಗಿದ್ದು, ನಮೂನೆ 6 ರಡಿ 2,388, ನಮೂನೆ 7 ರಡಿ 26, ನಮೂನೆ 8 ರಡಿ 3,224 ಅರ್ಜಿಗಳು ಸ್ವೀಕರಿಸಲಾಗಿದ್ದು, ಒಟ್ಟು 5,638 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದರು.

ಆಗಸ್ಟ್, 24 ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯ 2 ವಿಧಾನಸಭಾ ಕ್ಷೇತ್ರದಲ್ಲಿ 567 ಮತಗಟ್ಟೆಗಳಿದ್ದು, 4,05,803 ಮತದಾರರು ಇದ್ದು, ಇವರಲ್ಲಿ 1,98,294 ಪುರುಷ, 2,07,505 ಮಹಿಳಾ ಮತದಾರರು ಮತ್ತು 4 ಇತರೆ ಮತದಾರರು ಇದ್ದಾರೆ ಎಂದು ವಿವರಿಸಿದರು.

ಜಿಲ್ಲೆಯ ಸಮಗ್ರ ಅಂತಿಮ ಮತದಾರರ ಪಟ್ಟಿಯು ಇದೇ ಅ. 27ರಂದು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದ ಪ್ರತಿನಿಧಿ ತೆನ್ನಿರಾ ಮೈನಾ ಮಾತನಾಡಿ ಎಸ್‍ಐಆರ್ ಪ್ರಕ್ರಿಯೆ ಸರಿ ಇದ್ದರೂ ಸಹ, ಹಿರಿಯ ನಾಗರಿಕರಿಗೆ ನೋಟೀಸ್ ನೀಡಿ ಒಂದು ರೀತಿ ಮುಜುಗರ ಉಂಟು ಮಾಡಿರುವುದು ಸಮರ್ಥನೀಯವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಪ್ರತಿನಿಧಿ ಸಜಿಲ್ ಕೃಷ್ಣ ಮಾತನಾಡಿ, ಎಸ್‍ಐಆರ್ ಪ್ರಕ್ರಿಯೆ ಸುಗಮವಾಗಿ ನಡೆಯುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಮತದಾರರ ಪಟ್ಟಿಯಲ್ಲಿ ಅರ್ಹರ ಹೆಸರು ಬಿಟ್ಟುಹೋಗದಂತೆ ನೋಡಿ ಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದರು.

ಜೆಡಿಎಸ್ ಪ್ರತಿನಿಧಿ ಗುಲಾಬಿ ಜನಾರ್ಧನ, ಭಾರತೀಯ ಕಮ್ಯುನಿಸ್ಟ್ ಪಕ್ಷದ ರಮೇಶ್, ಚುನಾವಣಾ ತಹಶೀಲ್ದಾರ್ ಗುರುರಾಜ್, ಶಿರಸ್ತೆದಾರ್ ಮಹೇಶ್, ಅನಿಲ್ ಕುಮಾರ್ ಭಾಗವಹಿಸಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ