ಮೇಲೂರು ಗಂಗಮ್ಮ ದೇಗುಲದಲ್ಲಿ ಸೀರೆಗಳ ಹರಾಜು ಸೆ.7ರಂದು

ಮೇಲೂರು ಗಂಗಮ್ಮ ದೇಗುಲದಲ್ಲಿ ಸೀರೆಗಳ ಹರಾಜು ಸೆ.7ರಂದು

ಮೇಲೂರು ಗಂಗಮ್ಮ ದೇಗುಲದಲ್ಲಿ ಸೀರೆಗಳ ಹರಾಜು ಸೆ.7ರಂದು

ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರು ಗ್ರಾಮ ದೇವತೆ ಗಂಗಾದೇವಿ ದೇಗುಲದಲ್ಲಿ ಭಕ್ತರು ಕಾಣಿಕೆಯಾಗಿ ಅರ್ಪಿಸಿರುವ ಸುಮಾರು 1,000 ಸೀರೆಗಳ ಹರಾಜು ಸೆ.7ರಂದು ನಡೆಯಲಿದೆ.

ಮುಜರಾಯಿ ಇಲಾಖೆಗೆ ಸೇರಿದ ಪುರಾತನ ದೇವಾಲಯವಾಗಿರುವ ಗಂಗಾದೇವಿ ದೇವಾಲಯಕ್ಕೆ ನಗರ ಪ್ರದೇಶ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದೇವರಿಗೆ ಸೀರೆಗಳನ್ನು ಕಾಣಿಕೆಯಾಗಿ ಅರ್ಪಿಸುತ್ತಿದ್ದಾರೆ.

ಕಳೆದ ಸುಮಾರು ಆರು ತಿಂಗಳಿಂದ ದೇವಾಲಯದಲ್ಲಿ ಶೇಖರಣೆಯಾಗಿರುವ ಸೀರೆಗಳನ್ನು ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು ಎಂದು ತಹಶೀಲ್ದಾರ್ ಎನ್.ಗಗನಸಿಂಧು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.7ರ ಬೆಳಗ್ಗೆ 10 ಗಂಟೆಗೆ ಮೇಲೂರಿನ ಗಂಗಮ್ಮ ದೇವಾಲಯದ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260905-16-1750551936

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ