ದೇಶದ 8 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ ನೇಮಕ

ದೇಶದ 8 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ ನೇಮಕ

ದೇಶದ 8 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ದೇಶದ ವಿವಿಧ 8 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಲಾಗಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ತಮ್ಮ 'ಎಕ್ಸ್' ಖಾತೆಯಲ್ಲಿ ಈ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.

ನೂತನ ಮುಖ್ಯ ನ್ಯಾಯಮೂರ್ತಿಗಳ ವಿವರ:

ಪ್ರಸ್ತುತ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿರುವ ವಲ್ಲೂರಿ ಕಾಮೇಶ್ವರ ರಾವ್ ಅವರನ್ನು ಪಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ರವೀಂದ್ರ ವಿ.ಘುಗೆ ಅವರು ಕಲ್ಕತ್ತ ಹೈಕೋರ್ಟ್‌ನ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ.

ಛತ್ತೀಸಗಢ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕುಮಾರ್ ಅಗರವಾಲ್ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ, ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಮಹೇಶ್ ಚಂದ್ರ ತ್ರಿಪಾಠಿ ಅವರನ್ನು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ, ಅಶ್ವನಿ ಕುಮಾರ್ ಮಿಶ್ರಾ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.

ಇನ್ನು ಒಡಿಶಾ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ರಾಮ್ ಮಹಾಪಾತ್ರ ಅವರನ್ನು ಛತ್ತೀಸಗಢ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ, ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಅಲ್ಪೇಶ್ ಯಶವಂತ್ ಕೊಗ್ಜೆ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಪುಷ್ಪೇಂದ್ರ ಸಿಂಗ್ ಭಾಟಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ