ಮಧ್ಯಪ್ರದೇಶದಲ್ಲಿ ವಿಷಮಿಶ್ರಿತ ಮದ್ಯ ಸೇವಿಸಿ 9 ಮಂದಿ ಸಾವು, ಹಲವರು ಅಸ್ವಸ್ಥ

ಮಧ್ಯಪ್ರದೇಶದಲ್ಲಿ ವಿಷಮಿಶ್ರಿತ ಮದ್ಯ ಸೇವಿಸಿ 9 ಮಂದಿ ಸಾವು, ಹಲವರು ಅಸ್ವಸ್ಥ

ಮಧ್ಯಪ್ರದೇಶದಲ್ಲಿ ವಿಷಮಿಶ್ರಿತ ಮದ್ಯ ಸೇವಿಸಿ 9 ಮಂದಿ ಸಾವು, ಹಲವರು ಅಸ್ವಸ್ಥ

ಸಾಗರ (ಮಧ್ಯಪ್ರದೇಶ): ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ವಿಷಮಿಶ್ರಿತ ಮದ್ಯ ಸೇವಿಸಿ ಒಂಬತ್ತು ಜನರು ಮೃತಪಟ್ಟಿದ್ದಾರೆ. ಹಲವರು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಬಂಡಾ ತಹಸಿಲ್ ವ್ಯಾಪ್ತಿಯ ಎರಡು ಗ್ರಾಮಗಳಲ್ಲಿ ಈ ದುರಂತ ಸಂಭವಿಸಿದೆ.

ಸ್ಥಳೀಯರು ನಕಲಿ ಮದ್ಯವನ್ನು ಸೇವಿಸಿದ ಬಳಿಕ ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ʼವಿಷಮಿಶ್ರಿತ ಮದ್ಯ ಸೇವನೆಯಿಂದಲೇ ಈ ಸಾವುಗಳು ಸಂಭವಿಸಿವೆ ಎಂಬುದು ಪ್ರಾಥಮಿಕವಾಗಿ ತಿಳಿದುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎರಡೂ ಗ್ರಾಮಗಳಲ್ಲಿ ಮನೆ-ಮನೆ ಆರೋಗ್ಯ ತಪಾಸಣೆ ಮತ್ತು ಸ್ಕ್ರೀನಿಂಗ್ ಕಾರ್ಯವನ್ನು ತಕ್ಷಣವೇ ಆರಂಭಿಸಲಾಗಿದೆʼ ಎಂದು ಸಾಗರ ಜಿಲ್ಲಾಧಿಕಾರಿ ಪ್ರತಿಭಾ ಪಾಲ್ ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ