Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಇಳಿಕೆ, ಇಲ್ಲಿದೆ ಸೆಪ್ಟೆಂಬರ್ 11ರ ದರಪಟ್ಟಿ

Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಇಳಿಕೆ, ಇಲ್ಲಿದೆ ಸೆಪ್ಟೆಂಬರ್ 11ರ ದರಪಟ್ಟಿ

Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಇಳಿಕೆ, ಇಲ್ಲಿದೆ ಸೆಪ್ಟೆಂಬರ್ 11ರ ದರಪಟ್ಟಿ

Arecanut Price: ಅಡಿಕೆ ಧಾರಣೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ ಇಂದು (ಸೆಪ್ಟೆಂಬರ್ 11) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಇಂದು (ಸೆಪ್ಟೆಂಬರ್ 11) ರಾಶಿ ಅಡಿಕೆ ಗರಿಷ್ಠ (ಕ್ವಿಂಟಾಲ್‌ಗಳಲ್ಲಿ) ದರ 50,499 ರೂಪಾಯಿ, ಕನಿಷ್ಠ ದರ 36,200 ರೂಪಾಯಿ ಇದ್ದು, ಸರಾಸರಿ ಬೆಲೆ 46,099 ರೂಪಾಯಿಗೆ ಇಳಿಕೆಯಾಗಿದೆ. ಅಡಿಕೆ ಬೆಳೆಗಾರರು ಮುಂದಿನ ದಿನಗಳಲ್ಲಿ ಹೆಚ್ಚಳ ಆಗುವ ಭರವಸೆಯಲ್ಲಿದ್ದಾರೆ.

ಹಿಂದಿನ ದಿನದ ಅಡಿಕೆ ಧಾರಣೆ

* ಗರಿಷ್ಠ - 51,299 ರೂಪಾಯಿ
* ಕನಿಷ್ಠ - 42,199 ರೂಪಾಯಿ
* ಸರಾಸರಿ - 47,599 ರೂಪಾಯಿ

ಕಳೆದ 2025ರ ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ರೂಪಾಯಿಗೆ ಕುಸಿದಿತ್ತು. 2026ರ ಜನವರಿಯಲ್ಲಿ ಇಳಿಕೆಯತ್ತ ಸಾಗಿತ್ತು. ಫೆಬ್ರವರಿ, ಮಾರ್ಚ್‌ನಲ್ಲಿ ಏರಿಳಿತ ಆಗುತ್ತಿತ್ತು. ಏಪ್ರಿಲ್‌ನಲ್ಲಿ ಭರ್ಜರಿ ಏರಿಕೆಯಾಗಿದ್ದು, ತಿಂಗಳ ಅಂತ್ಯದಲ್ಲೂ ಅದೇ ದರ ಮುಂದುವರೆದಿತ್ತು. ಮೇ ಮೊದಲ ವಾರದ ಅಂತ್ಯದಲ್ಲಿ ಏರಿಕೆಯಾಗಿತ್ತು. ಜೂನ್‌ ಕೊನೇ ವಾರದ ಮಧ್ಯದಲ್ಲಿ ಕುಸಿತ ಕಂಡಿದ್ದು, ಜುಲೈ ಮೊದಲ ವಾರದ ಕೊನೆವರೆಗೂ ಅದೇ ಮುಂದುವರೆದಿತ್ತು. ಬಳಿಕ ತುಸು ಏರಿಕೆಯಾಗಿದ್ದು, ಆಗಸ್ಟ್‌ ಆರಂಭದಲ್ಲೇ ವೇಳೆಯೇ ಇಳಿಕೆಯಾಗಿತ್ತು. ಆದರೆ ಸೆಪ್ಟೆಂಬರ್ 7ರಂದು ಮತ್ತೆ ತುಸು ಏರಿಕೆಯಾಗಿದ್ದು, ಇದೀಗ 11ರಂದು ಇಳಿಕೆಯ ಹಾದಿ ಮುಂದುವರೆದಿದೆ.

ಯಾವಾಗ ಅಡಿಕೆ ಧಾರಣೆ ಎಷ್ಟಿತ್ತು?

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್‌ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.

ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆಯಾಗಿತ್ತು. ಮೇ ತಿಂಗಳ ಆರಂಭದಿಂದಲೂ ಜೂನ್‌ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆಯ ಹಾದಿ ಹಿಡಿದಿತ್ತು.

ನಂತರ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್‌ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿಯಲ್ಲಿ ಭಾರೀ ಇಳಿಕೆಯತ್ತ ಸಾಗಿದ್ದು, ಬಳಿಕ ಫೆಬ್ರವರಿ ಮೂರನೇ ವಾರದವರೆಗೂ ಏರಿಕೆಯ ಓಟ ಮುಂದುವರೆದಿತ್ತು. ಏಪ್ರಿಲ್‌ ಮಧ್ಯದಿಂದ ಅಂತ್ಯದವರೆಗೂ ಅದೇ ದರ ಮುಂದುವರೆದಿತ್ತು. ಆದರೆ ಜೂನ್ ತಿಂಗಳ ಕೊನೆಯ ವಾರದ ಮಧ್ಯದಲ್ಲಿ ಇಳಿಕೆಯಾಗಿದ್ದು, ಜುಲೈ ಮೊದಲ ವಾರದ ಆರಂಭದಲ್ಲೇ ಮತ್ತಷ್ಟು ಕಡಿಮೆಯಾಗಿತ್ತು. ಕೊನೆ ವಾರದಲ್ಲಿ ಏರಿಕೆಯ ಹಾದಿ ಹಿಡಿದಿದ್ದು, ಆಗಸ್ಟ್‌ ಆರಂಭ ಆಗುತ್ತಿದ್ದಂತೆ ಇಳಿಕೆಯ ಹಾದಿ ಹಿಡಿದಿತ್ತು. ಸೆಪ್ಟೆಂಬರ್ 11ರಂದು ಮತ್ತೆ ಇಳಿಕೆಯ ಹಾದಿ ಹಿಡಿದಿದೆ.

arecanut price hike business news

arecanut price hike business news

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ