
BELನಲ್ಲಿ ಉದ್ಯೋಗಾವಕಾಶ: ಸೆಪ್ಟೆಂಬರ್ 10ರಂದು ನೇರ ಸಂದರ್ಶನ
ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಬೆಂಗಳೂರು ಘಟಕದಲ್ಲಿ 'ಮ್ಯಾನೇಜ್‌ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ' ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ಆಯೋಜಿಸಿದೆ. ಸಿಎ ಇಂಟರ್ ಅಥವಾ CMA ಇಂಟರ್ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 10ರಂದು ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂಸ್ಥೆಯ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಯ ಹೆಸರು: ಮ್ಯಾನೇಜ್‌ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ
ಖಾಲಿ ಹುದ್ದೆಗಳ ಸಂಖ್ಯೆ: ವಿವಿಧ (ಅಧಿಸೂಚನೆ ಪ್ರಕಾರ)
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಮಾಸಿಕ ವೇತನ: ₹25,000 - ₹30,000
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ CA Inter ಅಥವಾ CMA Inter ಪೂರ್ಣಗೊಳಿಸಿರಬೇಕು.
ವಯೋಮಿತಿ: ಸೆಪ್ಟೆಂಬರ್ 1ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷ ಮೀರಿರಬಾರದು.
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC / ST ಅಭ್ಯರ್ಥಿಗಳಿಗೆ: 5 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC / ST ಅಭ್ಯರ್ಥಿಗಳಿಗೆ: 5 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಪ್ರತ್ಯೇಕವಾಗಿ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅಗತ್ಯ ಮೂಲ ದಾಖಲೆಗಳು ಹಾಗೂ ಸ್ವಯಂ ದೃಢೀಕರಿಸಿದ ನಕಲು ಪ್ರತಿಗಳೊಂದಿಗೆ (Self-attested copies) ಕೆಳಗಿನ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು:
ಸೆಂಟರ್ ಫಾರ್ ಲರ್ನಿಂಗ್ ಅಂಡ್ ಡೆವಲಪ್‌ಮೆಂಟ್, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ, ಬೆಂಗಳೂರು - 560013.
ಅಧಿಸೂಚನೆ ಪ್ರಕಟವಾದ ದಿನಾಂಕ: ಆಗಸ್ಟ್ 28
ನೇರ ಸಂದರ್ಶನ ನಡೆಯುವ ದಿನಾಂಕ: ಸೆಪ್ಟೆಂಬರ್ 10