ನಾಪೋಕ್ಲು | ಗಣೇಶ ಮೂರ್ತಿಗಳ ಭಕ್ತಿಪೂರ್ವಕ ವಿಸರ್ಜನೆ

ನಾಪೋಕ್ಲು | ಗಣೇಶ ಮೂರ್ತಿಗಳ ಭಕ್ತಿಪೂರ್ವಕ ವಿಸರ್ಜನೆ

ನಾಪೋಕ್ಲು | ಗಣೇಶ ಮೂರ್ತಿಗಳ ಭಕ್ತಿಪೂರ್ವಕ ವಿಸರ್ಜನೆ

ನಾಪೋಕ್ಲು: ಸಮೀಪದ ಮೂರ್ನಾಡಿನ ಪಟ್ಟಣದಲ್ಲಿ ಪ್ರತಿಷ್ಠಾಪಿಸಿದ್ದ ವಿವಿಧ ಗಣೇಶಮೂರ್ತಿಗಳನ್ನು ಭಾನುವಾರ ರಾತ್ರಿ ಬಲಮುರಿಯ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು.

ಮೂರ್ನಾಡಿನ ವಿವಿಧ ಸಂಘಗಳಿಂದ ಗೌರಿ-ಗಣೇಶೋತ್ಸವದ ದಿನ ಗಣೇಶ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಶ್ರದ್ಧಾಭಕ್ತಿಯಿಂದ ಏಳು ದಿನಗಳವರೆಗೆ ಪೂಜಾ ಕೈಂಕರ್ಯ ನಡೆಸಿ ಸಂಭ್ರಮೋಲ್ಲಾಸಗಳಿಂದ ವಿಸರ್ಜಿಸಲಾಯಿತು.

ಮೂರ್ನಾಡಿನ ವೆಂಕಟೇಶ್ವರ ಕಾಲೊನಿಯ ವಿನಾಯಕ ಯುವಕ ಮಂಡಳಿಯಿಂದ 35ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಉತ್ಸವ ಮೂರ್ತಿ, ಮೂರ್ನಾಡು ಗಾಂಧಿ ನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯಿಂದ 34ನೇ ವರ್ಷದ ಗೌರಿ-ಗಣೇಶೋತ್ಸವದ ಉತ್ಸವ ಗಣೇಶ ಮೂರ್ತಿ, ವಿಘ್ನೇಶ್ವರ ಸೇವಾ ಸಮಿತಿಯಿಂದ ಮೂರ್ನಾಡು ಪಟ್ಟಣದ ಟಿ. ಜಂಕ್ಷನ್‌ನಲ್ಲಿ 32ನೇ ವರ್ಷದ ಪ್ರತಿಷ್ಠಾಪಿಸಲಾದ ಗೌರಿ-ಗಣೇಶೋತ್ಸವದ ಗಣೇಶ ಮೂರ್ತಿ, ಗಜೇಂದ್ರ ಯುವ ಶಕ್ತಿ ಸಂಘದಿಂದ 7ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಮೂರ್ತಿ, ಅಯ್ಯಪ್ಪ ಗೆಳೆಯರ ಬಳಗ, ಎಂ-ಟೌನ್‌ನಿಂದ 3ನೇ ವರ್ಷದ ಗೌರಿ-ಗಣೇಶೋತ್ಸವದ ವಿನಾಯಕ ಮೂರ್ತಿ, ಕೋಡಂಬೂರಿನ ವಿಘ್ನೇಶ್ವರ ಗೆಳೆಯರ ಬಳಗದಿಂದ 18ನೇ ವರ್ಷದಗೌರಿ-ಗಣೇಶೋತ್ಸವ ಅಂಗವಾಗಿ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿರಿಸಿ ಮೂರ್ನಾಡಿನ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು.

ಗಣೇಶ ಉತ್ಸವ ಮೂರ್ತಿಗಳನ್ನು ಒಳಗೊಂಡ ಆರು ವಿದ್ಯುತ್ ಅಲಂಕೃತ ಮಂಟಪಗಳ ಮುಂದೆ ಡಿ.ಜೆ ಸೌಂಡ್ ಅಬ್ಬರವಿತ್ತು.

ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು. ಮೂರ್ನಾಡು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.

ಸಾರ್ವಜನಿಕರು, ಮಹಿಳೆಯರು, ಮಕ್ಕಳು ಡಿ.ಜೆ ಅಬ್ಬರಕ್ಕೆ ಹೆಜ್ಜೆ ಹಾಕುತ್ತಾ ಮೂರ್ನಾಡಿನ ಮುಖ್ಯ ರಸ್ತೆಗಳಲ್ಲಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು. ನಂತರ ಬಲಮುರಿಯ ಕಾವೇರಿ ನದಿಯಲ್ಲಿ ಎಲ್ಲಾ ಉತ್ಸವ ಮೂರ್ತಿಗಳನ್ನು ವಿಸರ್ಜಿಸಲಾಯಿತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ