ಕೋಡಿ: ಅಂತರರಾಷ್ಟ್ರೀಯ ಬೀಚ್ ಸ್ವಚ್ಛತಾ ಅಭಿಯಾನ

ಕೋಡಿ: ಅಂತರರಾಷ್ಟ್ರೀಯ ಬೀಚ್ ಸ್ವಚ್ಛತಾ ಅಭಿಯಾನ

ಕೋಡಿ: ಅಂತರರಾಷ್ಟ್ರೀಯ ಬೀಚ್ ಸ್ವಚ್ಛತಾ ಅಭಿಯಾನ

ಬ್ರಹ್ಮಾವರ: ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಕೋಟದ ಪಂಚವರ್ಣ ಸಂಘಟನೆಯ ಮಾರ್ಗದರ್ಶನದಲ್ಲಿ ಕೋಡಿ ಗ್ರಾಮ ಪಂಚಾಯಿತಿ, ಸಂಜೀವಿನಿ ಒಕ್ಕೂಟ, ಸ್ತ್ರೀ ಶಕ್ತಿ ಸಂಘ ಕೋಡಿ ಹೊಸಬೆಂಗ್ರೆ ಸಹಯೋಗದಲ್ಲಿ ಕೋಡಿ ಹೊಸಬೆಂಗ್ರೆ ಲೈಟ್ ಹೌಸ್ ಬೀಚ್‌ನಲ್ಲಿ ‘ಅಂತರರಾಷ್ಟ್ರೀಯ ಬೀಚ್ ಸ್ವಚ್ಛತಾ ಅಭಿಯಾನ’ ಕಾರ್ಯಕ್ರಮ ಆಯೋಜಿಸಲಾಯಿತು.

ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೆ.ಜಿ. ರಾಮದಾಸ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಪರಿಸರ ನೈರ್ಮಲ್ಯ, ಬೀಚ್ ಸ್ವಚ್ಛತೆ ಮಹತ್ವದ ಕುರಿತು ಜಾಗೃತಿ ಸಂದೇಶ ನೀಡಿದರು. ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಮಹೇಶ್ ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೋಡಿ ಪಿಡಿಒ ರವೀಂದ್ರ ರಾವ್, ಈ ರೀತಿಯ ಅಭಿಯಾನಗಳು ಸಮುದ್ರ ತೀರದ ನೈರ್ಮಲ್ಯವನ್ನು ಕಾಯ್ದುಕೊಳ್ಳಲು ಹೇಗೆ ಸಹಕಾರಿಯಾಗುತ್ತವೆ ಎಂಬುದನ್ನು ವಿವರಿಸಿದರು.

ಕೋಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪ್ರಭಾಕರ್ ಮೆಂಡನ್, ಗೀತಾ ಖಾರ್ವಿ, ಸದಸ್ಯ ಕೃಷ್ಣ ಪೂಜಾರಿ ಪಿ., ಸಂಜೀವಿನಿ ಒಕ್ಕೂಟದ ಮಾಜಿ ಅಧ್ಯಕ್ಷೆ ದೀಪಾ ಖಾರ್ವಿ, ಅಧ್ಯಕ್ಷೆ ಶಾಂತಾ ಮೆಂಡನ್, ಎಂಬಿಕೆ ಅನಿತಾ, ಸ್ತ್ರೀ ಶಕ್ತಿ ಸಂಘದ ಸದಸ್ಯರಾದ ಸುಜಾತಾ ಖಾರ್ವಿ, ಮಾಲತಿ ಕೆ., ಎಸ್‌ಎಲ್‌ಆರ್‌ಎಂ ಘಟಕದ ಸಿಬ್ಬಂದಿ ಕಿರಣ್, ಗ್ರಾ.ಪಂ. ಸಿಬ್ಬಂದಿ ಜಯಕುಮಾರ್ ಭಾಗವಹಿಸಿದ್ದರು. ಗ್ರಾ.ಪಂ. ಕಾರ್ಯದರ್ಶಿ ಉಮೇಶ್ ನಿರೂಪಿಸಿದರು. ಹೊಸಬೆಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್. ಕುಂದರ್ ವಂದಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ