ಧಾರವಾಡ ತಾಲ್ಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಗೆ ಒತ್ತಾಯ

ಧಾರವಾಡ ತಾಲ್ಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಗೆ ಒತ್ತಾಯ

ಧಾರವಾಡ ತಾಲ್ಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಗೆ ಒತ್ತಾಯ

ಧಾರವಾಡ: ‘ಮಳೆ ಕೊರತೆಯಿಂದ ತಾಲ್ಲೂಕಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಧಾರವಾಡ ತಾಲ್ಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಬೇಕು. ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು’ ಎಂದು ಮಾಜಿ ಶಾಸಕ ಅಮೃತ ದೇಸಾಯಿ ಒತ್ತಾಯಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಳೆ ಕೈಕೊಟ್ಟಿದ್ದರಿಂದ ಬೆಳೆಗಳು ಒಣಗಿದವು. ಬಿತ್ತನೆಗೆ ಮಾಡಿದ ಖರ್ಚೂ ಕೈಗೆ ಸಿಗದಂತಾಗಿದೆ’ ಎಂದರು.

‘ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ ಅವರು ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ರಾಜಕೀಯ ಮುಖಂಡರನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದರು.

‘ತಾಂತ್ರಿಕ ಕಾರಣ ನೀಡಿ ವೃದ್ಧಾಪ್ಯ, ಅಂಗವಿಕಲ, ವಿಧವಾ ಪಿಂಚಣಿ ಸ್ಥಗಿತಗೊಳಿಸಿರುವುದರಿಂದ ಫಲಾನುಭವಿಗಳಿಗೆ ತೊಂದರೆಯಾಗಿದೆ. ಸರ್ಕಾರ ಪಿಂಚಣಿ ಬಿಡುಗಡೆಗೊಳಿಸಬೇಕು. ಹೊಸವಾಳ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರು ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆಯಿಂದಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಿ ಪರಿಹಾರ ನೀಡಬೇಕು. ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದರು. ಮಾಜಿ ಶಾಸಕಿ ಸೀಮಾ ಮಸೂತಿ, ಶಂಕರ ಶೇಳಕೆ, ಶಂಕರಕುಮಾರ ದೇಸಾಯಿ, ಮಹದೇವಪ್ಪ ದಂಡಿನ, ಸಿದ್ದನಗೌಡ ಪಾಟೀಲ ಸುದ್ದಿಗೋಷ್ಠಿಯಲ್ಲಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ