ಕೊರಟಗೆರೆ: ಹೊಳವನಹಳ್ಳಿ ಹೋಬಳಿಗೆ ಬಸ್ ಸಂಚಾರ ಬಂದ್; ವಿದ್ಯಾರ್ಥಿಗಳ ಪರದಾಟ

ಕೊರಟಗೆರೆ: ಹೊಳವನಹಳ್ಳಿ ಹೋಬಳಿಗೆ ಬಸ್ ಸಂಚಾರ ಬಂದ್; ವಿದ್ಯಾರ್ಥಿಗಳ ಪರದಾಟ

ಕೊರಟಗೆರೆ: ಹೊಳವನಹಳ್ಳಿ ಹೋಬಳಿಗೆ ಬಸ್ ಸಂಚಾರ ಬಂದ್; ವಿದ್ಯಾರ್ಥಿಗಳ ಪರದಾಟ

ಕೊರಟಗೆರೆ: ತಾಲ್ಲೂಕು ಕೇಂದ್ರದಿಂದ ಕೇವಲ 10 ಕಿ.ಮೀ. ದೂರದಲ್ಲಿರುವ ಹೊಳವನಹಳ್ಳಿ ಹೋಬಳಿ ಕೇಂದ್ರಕ್ಕೆ 20 ದಿನಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೊಳವನಹಳ್ಳಿಯಲ್ಲಿ ಕೆಪಿಎಸ್ ಶಾಲೆ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಿದ್ದು, ಸುತ್ತಲಿನ ಗ್ರಾಮಗಳಿಂದ ನೂರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲೆಗೆ ಬರುತ್ತಾರೆ. ಆದರೆ ರಸ್ತೆ ಕಾಮಗಾರಿ ಇರುವುದರಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಹಲವು ವಿದ್ಯಾರ್ಥಿಗಳು ದಿನಕ್ಕೆ 5ರಿಂದ 6 ಕಿ.ಮೀ. ನಡೆದು ಶಾಲೆ ತಲುಪುವಂತಾಗಿದೆ.

ಹೊಳವನಹಳ್ಳಿ ಮಾರ್ಗದ ಬೊಮ್ಮಲದೇವಿಪುರ, ಕೋಡ್ಲಹಳ್ಳಿ ಭಾಗಗಳಿಗೆ ನಿತ್ಯ ಸಂಚರಿಸುವ ನೌಕರರಿಗೆ ಸಮಸ್ಯೆಯಾಗಿದೆ. ಪಟ್ಟಣದಿಂದ ದುಪ್ಪಟ್ಟು ಹಣ ನೀಡಿ ಆಟೊದಲ್ಲಿ ಪ್ರಯಾಣಿಸುವುದು ಅನಿವಾರ್ಯ.

ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಗೌರಿಬಿದನೂರು-ತುಮಕೂರು ಮಾರ್ಗದಲ್ಲಿ ಸಂಚರಿಸುವ ಬಸ್‌ಗಳು ಅಕ್ಕಿರಾಂಪುರ-ಗೌರಗಾನಹಳ್ಳಿ ಮಾರ್ಗವಾಗಿ ಹೋಗುತ್ತಿವೆ. ಹೊಳವನಹಳ್ಳಿಗೆ ಹೋಗುವವರು ಅಕ್ಕಿರಾಂಪುರ ಅಥವಾ ಗೌರಗಾನಹಳ್ಳಿ ಕ್ರಾಸ್‌ನಲ್ಲಿ ಇಳಿದು ನಂತರ ನಡೆದು ಹೋಗಬೇಕಿದೆ.

‘ಬಸ್ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳ ಹಾಜರಾತಿ ಹಾಗೂ ಶೈಕ್ಷಣಿಕ ಪ್ರಗತಿ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳು ಪ್ರತಿದಿನ ಇಷ್ಟು ದೂರ ನಡೆದು ಬರಲು ಸಾಧ್ಯವಾಗುವುದಿಲ್ಲ. ಬಸ್‌ ವ್ಯವಸ್ಥೆ ಕಲ್ಪಿಸುವುದು ಅಗತ್ಯ’ ಎಂದು ಉಪನ್ಯಾಸಕ ಎಚ್.ಎಂ. ರುದ್ರೇಶ್ ಹೇಳಿದರು.

ಕುಂಟುತ್ತ ಸಾಗಿದ ಕಾಮಗಾರಿ: ಸಿ.ಸಿ. ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇದಕ್ಕಾಗಿ ಬಸ್‌ ಸಂಚಾರ ಬಂದ್ ಮಾಡಿರುವುದು ಸರಿಯಲ್ಲ. ಒಂದು ಬದಿಯಲ್ಲಿ ಕಾಮಗಾರಿ ನಡೆಸಿ, ಮತ್ತೊಂದು ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದಿತ್ತು ಎನ್ನುವುದು ಜನರ ಆಗ್ರಹ.

ಕಾಮಗಾರಿ ನಡೆಯುವ ಸಂದರ್ಭದಲ್ಲಿ ಪರ್ಯಾಯ ಮಾರ್ಗ ಅಥವಾ ತಾತ್ಕಾಲಿಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕಿತ್ತು. ಆದರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ರಸ್ತೆ ಸಂಪರ್ಕ ಕಡಿತಗೊಳಿಸಿರುವುದರಿಂದ ಹೋಬಳಿ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ.

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಬಸ್ ಸಂಚಾರ ಪುನರಾರಂಭಿಸಬೇಕು. ಅಲ್ಲಿಯವರೆಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ