
ಕರಾಟೆ ಸ್ಪರ್ಧೆ: ಗಜೇಂದ್ರಗಡದ ವಿದ್ಯಾರ್ಥಿ ಮಿಥುನ ಬಾರಕೇರ ರಾಜ್ಯಮಟ್ಟಕ್ಕೆ ಆಯ್ಕೆ
ಗಜೇಂದ್ರಗಡ: ಸಮೀಪದ ಸೂಡಿ ಗ್ರಾಮದ ಗುರು ಮಹಾಂತೇಶ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಮಿಥುನ ಬಾರಕೇರ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಗದಗ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ 14ರಿಂದ 17 ವರ್ಷದೊಳಗಿನ ಬಾಲಕರ 40 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಮಿಥುನ ಬಾರಕೇರ ಪ್ರಥಮ ಸ್ಥಾನ ಪಡೆದಿದ್ದಾನೆ. ಆ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.