ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ: ತನಿಖಾ ಸಂಸ್ಥೆಗಳಿಗೆ ವರದಿ ಮಾಡಲು ಮೆಟಾ ಒಪ್ಪಿಗೆ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ: ತನಿಖಾ ಸಂಸ್ಥೆಗಳಿಗೆ ವರದಿ ಮಾಡಲು ಮೆಟಾ ಒಪ್ಪಿಗೆ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ: ತನಿಖಾ ಸಂಸ್ಥೆಗಳಿಗೆ ವರದಿ ಮಾಡಲು ಮೆಟಾ ಒಪ್ಪಿಗೆ

ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಕಾನೂನು ಜಾರಿ ಸಂಸ್ಥೆಗಳಿಗೆ ವರದಿ ಮಾಡಲು ಮೆಟಾ ಒಪ್ಪಿಕೊಂಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿದೆ.

ಮಕ್ಕಳಿಗಾಗಿ ಸಾಮಾಜಿಕ ಜಾಲತಾಣಗಳನ್ನು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆಯಾಗಿದ್ದು, ಇನ್ನು ಹೆಚ್ಚಿನ ಕೆಲಸಗಳು ಆಗಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರತದಲ್ಲಿ ಕಾರ್ಯಾಚರಣೆ ನಡೆಸುವ ಯಾವುದೇ ಸಾಮಾಜಿಕ ಜಾಲತಾಣಗಳು ಮಕ್ಕಳ ಆನ್‌ಲೈನ್ ಸುರಕ್ಷತೆಯ ವಿಷಯದಲ್ಲಿ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ.

ಅಂತರ್ಜಾಲದಲ್ಲಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ವಿಫಲವಾಗುವ ಪ್ಲಾಟ್‌ಫಾರ್ಮ್‌ಗಳ ವಿರುದ್ಧ ಸರ್ಕಾರವು ಕ್ರಮಕೈಗೊಳ್ಳಲಿದೆ. ಅಪ್ರಾಪ್ತರ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಯ ಮತ್ತು ಚುಟವಟಿಕೆಗಳಿಂದ ರಕ್ಷಿಸುವ ಜವಾಬ್ದಾರಿಯ ವಿಷಯದಲ್ಲಿ ನಾವು ಕಠಿಣ ನಿಲುವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ವಿಷಯಗಳನ್ನು ಗುರುತಿಸಿ ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳೊಂದಿಗೂ ಮಾತುಕತೆಯಲ್ಲಿ ನಿರತವಾಗಿದೆ ಎಂದು ತಿಳಿಸಿದ್ದಾರೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಡೀಪ್‌ಫೇಕ್‌ಗಳು ಸೇರಿದಂತೆ ಕಾನೂನುಬಾಹಿರ ವಿಷಯಗಳ ಕುರಿತು ಸರ್ಕಾರವು ಸಾಮಾಜಿಕ ಜಾಲತಾಣಗಳ ಮೇಲಿನ ಪರಿಶೀಲನೆಯನ್ನು ಚುರುಕುಗೊಳಿಸಿದೆ. ಆನ್‌ಲೈನ್‌ ಸುರಕ್ಷತೆಯ ವಿಷಯದಲ್ಲಿ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದು ಮತ್ತು ಹೊಣೆಗಾರಿಕೆ ತೆಗದುಕೊಳ್ಳದ ಹಿನ್ನೆಲೆಯಲ್ಲಿ ಮೆಟಾಗೆ ನೋಟಿಸ್ ನೀಡಿದ್ದ ಸರ್ಕಾರ, ಅದರ ಜಾಗತಿಕ ಕಾರ್ಯನಿರ್ವಾಹಕರನ್ನು ಭಾರತಕ್ಕೆ ಕರೆಸಲಾಗಿತ್ತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ